Tumkuru look kkoó
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸೇವಕ ಹುದ್ದೆಗಳಿಗೆ ಅರ್ಜಿ ಕರೆದಿದ್ದು, ಅಗತ್ಯ ಮಾಹಿತಿ ಇಲ್ಲಿದೆ. ಈ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಸೇವಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಕರೆದಿದೆ. ಅರ್ಜಿಗಳನ್ನು ತುಮಕೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವೆಬ್ ಸೈಟ್ “http://district.ecourt.gov.in/tumkuronlinerecruitment” ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್ ಲೈನ್ ನಲ್ಲಿ 30/05/2022ರಿಂದ 15/06/2022ರ ರಾತ್ರಿ 11.59 ರವರೆಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಸಂಖ್ಯೆ; 51
ವೇತನ ಶ್ರೇಣಿ; 17000-400-18600-450-20400-500-22400-550-24600-600-27000-650-28950 ಮತ್ತು ಇತರೆ ಭತ್ಯೆಗಳು.
ಶೈಕ್ಷಣಿಕ ಅರ್ಹತೆ; SSLC ಉತ್ತೀರ್ಣತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
ವಯೋಮಿತಿ; ಕನಿಷ್ಠ ವಯೋಮಿತಿ- 18 ವರ್ಷ, ಗರಿಷ್ಠ ವಯೋಮಿತಿ(ಸಾಮಾನ್ಯ ವರ್ಗ)- 35, ಪ್ರವರ್ಗ 2ಎ, 2ಬಿ, 3ಎ, 3ಬಿ- 38 ವರ್ಷ, ಪ.ಜಾ/ಪ.ಪಂ/ಪ್ರವರ್ಗ -1- 40 ವರ್ಷ.
ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆ, ಮಾಜಿ ಸೈನಿಕರು ಹಾಗೂ ವಿಕಲಚೇತನರಿಗೆ ಕರ್ನಾಟಕ ಸಿವಿಲ್ ಸೇವೆಗಳು(ಸಾಮಾನ್ಯ ನೇಮಕಾತಿ) ನಿಯಮಗಳು, 1977ರ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೇಲೆ ನೀಡಲಾಗಿರುವ ನ್ಯಾಯಾಲಯದ ವೆಬ್ ಸೈಟ್ ನಲ್ಲಿ ಪರಿಶೀಲಿಸಿಕೊಳ್ಳಬಹುದು.