ರಾಮನಗರ: ಬೀದಿ ನಾಯಿಗಳ ದಾಳಿಗೆ ಮೋನಿಕಾ ಎಂಬ ಐದು ವರ್ಷದ ಬಾಲಕಿ ಬಿಡದಿ ಪಟ್ಟಣದ ಕೆಂಚನಕುಪ್ಪೆ ಜನತಾ ಕಾಲೊನಿಯಲ್ಲಿ ಮೃತಪಟ್ಟಿದ್ದಾಳೆ.
ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿ ಮೇಲೆ ಶನಿವಾರ ಸಂಜೆ ನಾಯಿಗಳು ಏಕಾ ಏಕಿ ಎರಗಿ ತೀವ್ರವಾಗಿ ಗಾಯಗೊಳಿಸಿದ್ದವು. ಚಿಕಿತ್ಸೆಗಾಗಿ ಬಾಲಕಿಯನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಿಗ್ಗೆ ಬಾಲಕಿ ಸಾವನ್ನಪ್ಪಿದ್ದಾಳೆ. ಘಟನೆ ಬಗ್ಗೆ ಗ್ರಾಮಸ್ಥರು ಪುರಸಭೆ ನಿರ್ಲಕ್ಷ್ಯ ಧೋರಣೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.