Thursday, November 21, 2024
Google search engine
Homeತುಮಕೂರು ಲೈವ್ವರ್ಷದಲ್ಲಿ 1 ಲಕ್ಷ ಹೆಣ್ಣು ಭ್ರೂಣ ಹತ್ಯೆ: CEO ಶುಭಕಲ್ಯಾಣ್

ವರ್ಷದಲ್ಲಿ 1 ಲಕ್ಷ ಹೆಣ್ಣು ಭ್ರೂಣ ಹತ್ಯೆ: CEO ಶುಭಕಲ್ಯಾಣ್

Publicstory. in


Tumukuru: ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಕಾನೂನು ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ರಾಘವೇಂದ್ರ ಶೆಟ್ಟಿಗಾರ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಕ್ಕಳ ಸಹಾಯವಾಣಿ -1098 ಅಭಿವೃದ್ಧಿ ಸಾಮಾಜಿಕ ಸೇವಾ ಸಂಸ್ಥೆ ಸಹಯೋಗದಲ್ಲಿ ನಗರದ ಬಾಲಭವನದಲ್ಲಿ ಹಮ್ಮಿಕೊಂಡಿದ್ದ “ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ” ಉದ್ಘಾಟಿಸಿ ಅವರು ಮಾತನಾಡಿದರು.

ಸಾಧಕ ಮಕ್ಕಳನ್ನು ಸನ್ಮಾನಿಸಲಾಯಿತು

ಹಿಂದಿನ ಕಾಲದಿಂದಲೂ ಶೋಷಿತ ವರ್ಗವೆಂದೇ ಕರೆಸಿಕೊಳ್ಳುವ ಮಹಿಳೆಯರು ಮತ್ತು ಮಕ್ಕಳ ರಕ್ಷಣೆ ಹಾಗೂ ಶಿಕ್ಷಣದ ಬಗ್ಗೆ ಪ್ರತಿಯೊಬ್ಬರು ಯೋಚಿಸಬೇಕು. ಹೆಣ್ಣು ಭ್ರೂಣಹತ್ಯೆ, ವರದಕ್ಷಿಣೆ, ಬಾಲ್ಯವಿವಾಹ, ಅತ್ಯಾಚಾರ ಸೇರಿದಂತೆ ಮುಂತಾದ ಸಮಸ್ಯೆಗಳಿಂದ ಬಳಲುತ್ತಿರುವ ಹೆಣ್ಣಿನ ರಕ್ಷಣೆಗೆ ಈ ಆಧುನಿಕ ಯುಗದಲ್ಲಿ ಕಾನೂನು ಅನಿವಾರ್ಯ. ಹಾಗಾಗಿ ಎಲ್ಲರೂ ಕಾನೂನನ್ನು ಅರಿತುಕೊಳ್ಳಬೇಕು ಎಂದು ಮಕ್ಕಳಿಗೆ ಸಲಹೆ ನೀಡಿದರು.

ದಕ್ಷಿಣ ಭಾರತ ಭಾಗದಲ್ಲಿ ಬಾಲ್ಯವಿವಾಹ ಕಡಿಮೆಯಾಗಿದೆ. ಉತ್ತರ ಭಾರತದ ಕೆಲವೊಂದು ಪ್ರದೇಶಗಳಲ್ಲಿ ಇನ್ನೂ ಬಾಲ್ಯವಿವಾಹ ಚಾಲ್ತಿಯಲ್ಲಿದೆ. ಬಾಲ್ಯ ವಿವಾಹ ಕಾನೂನು ಪ್ರಕಾರ ಅಪರಾಧ. ಹಾಗಾಗಿ ಬಾಲ್ಯ ವಿವಾಹ ಕಂಡುಬಂದಲ್ಲಿ ಯಾರೂ ಬೇಕಾದರೂ ಹತ್ತಿರದ ಪೊಲೀಸ್ ಠಾಣೆ ಅಥವಾ ತಾಲ್ಲೂಕಿನ ಪ್ರಥಮ ನ್ಯಾಯಿಕ ದಂಡಾಧಿಕಾರಿ ಅವರಿಗೆ ದೂರು ನೀಡಬಹುದು ಎಂದು ಅವರು ತಿಳಿಸಿದರು.

ಹೆಣ್ಣು ಮಕ್ಕಳಿಗೆ ಹೆಚ್ಚಿನ ಬೆಂಬಲ, ಅವಕಾಶಗಳನ್ನು ನೀಡುವ ಸಲುವಾಗಿ ಮತ್ತು ಹೆಣ್ಣು ಮಕ್ಕಳು ಅನುಭವಿಸುತ್ತಿರುವ ಲಿಂಗ ತಾರತಮ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದಕ್ಕಾಗಿ ಹೆಣ್ಣು ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಕಲ್ಯಾಣ್ ಮಾತನಾಡಿ, ಒಂದು ವರ್ಷದಲ್ಲಿ ಸುಮಾರು ಒಂದು ಲಕ್ಷ ಹೆಣ್ಣು ಮಕ್ಕಳು ತಾಯಿಯ ಗರ್ಭದಲ್ಲಿಯೇ ಸಾವನ್ನಪ್ಪುತ್ತಿವೆ. ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಇನ್ನೂ ನಿಂತಿಲ್ಲ ಎಂದು ವಿಷಾದಿಸಿದ ಅವರು ಇಂದು ಈ ಭೂಮಿ ಮೇಲೆ ಹೆಣ್ಣಾಗಿ ಹುಟ್ಟಿರುವ ನೀವುಗಳು ಉನ್ನತ ಶಿಕ್ಷಣ ಪಡೆಯುವ ಮುಖಾಂತರ ಅಪಾರವಾದ ಸಾಧನೆ ಮಾಡಬೇಕು ಎಂದು ಮಕ್ಕಳಿಗೆ ತಿಳಿ ಹೇಳಿದರು.


ಪ್ರಸ್ತುತ ಕಾಲ ಘಟ್ಟದಲ್ಲಿ ಪ್ರತಿ ವರ್ಷವೂ ಸಹ ಎಸ್‍ಎಸ್‍ಎಲ್‍ಸಿಯಲ್ಲಿ ಪರೀಕ್ಷೆಯಲ್ಲಿ ಹೆಣ್ಣು ಮಕ್ಕಳ ಮೇಲುಗೈ ಸಾಧಿಸುತ್ತಾರೆ. ಅದು ಎಸ್‍ಎಸ್‍ಎಲ್‍ಸಿಗೆ ಮಾತ್ರ ಸೀಮಿತವಾಗಿರಬಾರದು. ಉನ್ನತ ಮಟ್ಟದ ಶಿಕ್ಷಣದ ಸಾಧನೆ ಹಾಗೂ ಉದ್ಯೋಗವನ್ನು ಗಿಟ್ಟಿಸಿಕೊಳ್ಳುವವರೆಗೂ ಮುಂದುವರೆಸಬೇಕು ಎಂದು ಶುಭಾ ಕಲ್ಯಾಣ್ ಹೇಳಿದರು.

ಹೆಣ್ಣು ಮಕ್ಕಳು ಸಂಸ್ಕೃತಿ ಚೌಕಟ್ಟಿನಲ್ಲಿಯೇ ಎಷ್ಟು ಎತ್ತರಕ್ಕೆ ಬೇಕಾದರೂ ಬೆಳೆದು ಸಾಧನೆ ಮಾಡಬಹುದು. ತಂದೆ-ತಾಯಿಯ ಮಾತನ್ನು ಶಿರಸವಹಿಸಿ ಪಾಲಿಸಬೇಕು. ಅವರ ಮಾರ್ಗದರ್ಶನದಲ್ಲಿ ಬೆಳೆಯಬೇಕು ಎಂದು ಮಕ್ಕಳಿಗೆ ಅವರು ಕಿವಿಮಾತು ಹೇಳಿದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಗಾಯಿತ್ರಿ ಅವರು ಮಾತನಾಡಿ, 2008 ರಿಂದ ದೇಶದ ಎಲ್ಲಾ ರಾಜ್ಯಗಳಲ್ಲೂ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಮಹಿಳೆಯರಿಗೆ ಪುರುಷರಷ್ಟೇ ಸಮಾನ ಅವಕಾಶ ಸಿಗಬೇಕು. ಈ ನಿಟ್ಟಿನಲ್ಲಿ ಮಹಿಳೆಯರ ರಕ್ಷಣೆ ಮತ್ತು ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದರಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿ ಈಗಲೂ ಸಹ “ಹೆಣ್ಣು ಹುಟ್ಟಿದರೆ ಹುಣ್ಣು ಹುಟ್ಟಿದಂತೆ” ಎಂಬ ಗಾದೆ ಮಾತಿದೆ. ಆದರೆ ಈ ರೀತಿಯ ಮನೋಭಾವನೆಯನ್ನು ತೆಗೆದು ಹಾಕಬೇಕು. ಹೆಣ್ಣು ಮಕ್ಕಳಿಗೆ ಯಾವುದೇ ಕಟ್ಟುಪಾಡುಗಳನ್ನು ವಿಧಿಸದೆ, ಅವರ ಮೆಲೆ ನಿರ್ಭಂದ ಹೇರದೆ ಹೆಚ್ಚಿನ ಅವಕಾಶಗಳನ್ನು ಹೆಣ್ಣು ಮಕ್ಕಳಿಗೆ ಒದಗಿಸಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಎಂ.ಆರ್.ಕಾಮಾಕ್ಷಿ ಮಾತನಾಡಿ, ಭಾರತದ ನೆಲದಲ್ಲಿ, ಸಾಂವಿಧಾನಿಕ ವ್ಯವಸ್ಥೆಯಲ್ಲಿ ಹೆಣ್ಣಿಗೆ ಪ್ರತಿಷ್ಟಿತ ಸ್ಥಾನವಿದೆ. ಹಾಗಾಗಿ ಎಲ್ಲಾ ಹೆಣ್ಣು ಮಕ್ಕಳು ಸಾಧನೆಯಡೆಗೆ ಮುನ್ನಡೆಯಬೇಕು. ಸಾಮಾಜಿಕ ಸಮಸ್ಯೆಗಳಿಗೆ ದಿವ್ಯ ಔಷಧ ಶಿಕ್ಷಣವಾಗಿದೆ. ಸಮಾಜ, ಸರ್ಕಾರ, ಪೋಷಕರು, ಶಿಕ್ಷಕರು ಪ್ರತಿಯೊಂದು ಮಗುವಿಗೆ ಶಿಕ್ಷಣವನ್ನು ಒದಗಿಸುವ ಕರ್ತವ್ಯವನ್ನು ಪಾಲಿಸಬೇಕು ಎಂದು ಅವರು ತಿಳಿಸಿದರು.

ಮಕ್ಕಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಕಲಿತದದ್ದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಕ್ಷಣ ಎನ್ನುವುದು ನಿರಂತರವಾಗಿರಬೇಕು. ಮಹಿಳೆಯರ ಸಾಧನೆಯನ್ನು ಮಾರ್ಗದರ್ಶನವನ್ನಾಗಿಸಿಕೊಂಡು ಉತ್ತಮ ಭವಿಷ್ಯ ರೂಢಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

ಇನ್ಸ್ಪೆಕ್ಟರ್ ಸಲ್ಮಾನ್ ಕೆ ಎನ್ on ಕ್ರೀಡಾಕೂಟ ಝಲಕ್
Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?