ತುಮಕೂರು: ತುಮಕೂರು ನಗರದ ಶೇಷಾದ್ರಿಪುರಂ ಪದವಿಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ವಾಸುದೇವ ಬಿ.ಎ. ರವರು ಗೌರವ ಡಿ.ಲಿಟ್. ಪದವಿಗೆ ಪಾತ್ರರಾಗಿದ್ದಾರೆ.
ಶ್ರೀಯುತರು 21 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಹಾಗೂ ಕೈಗೊಂಡಿರುವ ಸಮಾಜಮುಖಿ ಮತ್ತು ವಿದ್ಯಾರ್ಥಿಮುಖಿ ಕಾರ್ಯಗಳನ್ನು ಪರಿಗಣಿಸಿ ಬೊಲಿವಿಯಾದ ಯೂನಿವರ್ಸಿಟಿ ಆಫ್ ಸೆಂಟ್ರಲ್ ಅಮೆರಿಕಾ ಈ ಪದವಿಯನ್ನು ಪ್ರಧಾನ ಮಾಡಿದೆ.
ಇತ್ತೀಚೆಗೆ ಮುಂಬೈನ ಡಾ.ರಾಧಾಕೃಷ್ಣನ್ ಟೀಚರ್ಸ್ ವೆಲ್‍ಫೇರ್ ಅಸೋಸಿಯೇಷನ್‍ನ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪದವಿ ಪ್ರಧಾನ ಸಮಾರಂಭದಲ್ಲಿ ಪದವಿಯನ್ನು ನೀಡಲಾಯಿತು.
ಶ್ರೀಯುತರನ್ನು ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಅಧ್ಯಕ್ಷ ಎನ್.ಆರ್. ಪಂಡಿತಾರಾಧ್ಯ, ಗೌರವ ಪ್ರಧಾನ ಕಾರ್ಯದರ್ಶಿ ಡಾ. ವೂಡೇ ಪಿ. ಕೃಷ್ಣ, ಶಿಕ್ಷಣ ದತ್ತಿಯ ಧರ್ಮದರ್ಶಿಗಳು, ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.