ತುಮಕೂರು- ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಿದ್ದ 47ನೇ ವರ್ಷದ ಗಣೇಶಮೂರ್ತಿಯನ್ನು ವಿವಿಧ ಜಾನಪದ ಕಲಾ ತಂಡಗಳ ಮೆರವಣಿಗೆ ಹಾಗೂ ಅದ್ದೂರಿ ತೆಪ್ಪೋತ್ಸವದೊಂದಿಗೆ ನಗರದ ಅಮಾನಿಕೆರೆಯಲ್ಲಿ ಸಂಜೆ ವಿಸರ್ಜಿಸಲಾಯಿತು.
ಗಣೇಶಮೂರ್ತಿ ವಿಸರ್ಜನೆ ಅಂಗವಾಗಿ ನಡೆದ ತೆಪ್ಪೋತ್ಸವ ನಡೆಯುವ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.
ಗಣೇಶೋತ್ಸವದಲ್ಲಿ ಸಿದ್ದಿವಿನಾಯಕ ಸೇವಾ ಮಂಡಳಿಯ ಉಪಾಧ್ಯಕ್ಷ ಹೆಚ್.ಆರ್. ನಾಗೇಶ್, ಕಾರ್ಯದರ್ಶಿ ರಾಘವೇಂದ್ರರಾವ್, ಸಹಕಾರ್ಯದರ್ಶಿ ಜಗಜ್ಯೋತಿ ಸಿದ್ದರಾಮಯ್ಯ, ಖಜಾಂಚಿ ಪ್ರಭು, ಸಾಂಸ್ಕೃತಿಕ ಸಮಿತಿಯ ಟಿ.ಹೆಚ್. ಪ್ರಸನ್ನಕುಮಾರ್, , ಉತ್ಸವ ಸಮಿತಿ ಅಧ್ಯಕ್ಷ ಕೋರಿ ಮಂಜಣ್ಣ, ಎನ್. ವೆಂಕಟೇಶ್ ಕಲ್ಪನ ಹಾಲಪ್ಪ, ನಿರ್ದೇಶಕರಾದ ಎಂ.ಲಿಂಗಪ್ಪ, ಜಿ.ಎಸ್.ಸಿದ್ದರಾಜು, ಕೆ.ನರಸಿಂಹಮೂರ್ತಿ, ಟಿ.ಆರ್ ನಟರಾಜು, ಟಿ.ಹೆಚ್.ಮಹೇಶ್, ಜಿ.ಸಿ.ವಿರುಪಾಕ್ಷ, ಡಾ.ಎಸ್.ವಿ.ವೆಂಕಟೇಶ್, ಹೇಮರಾಜು ಸಿಂಚ, ಎ.ಎಸ್.ವಿಜಯಕುಮಾರ್, ಟಿ.ಆರ್.ವೆಂಕಟೇಶ್‍ಬಾಬು, ಟಿ.ಕೆ.ಪದ್ಮರಾಜ್, ಎಂ.ಎನ್.ಉಮಾಶಂಕರ್, ಆರ್.ಎಲ್.ರಮೇಶ್‍ಬಾಬು, ಡಾ.ಅನುಸೂಯ ರುದ್ರಪ್ರಸಾದ್, ರೇಣುಕಾ ಪರಮೇಶ್, ಇಂದ್ರಾಣಿ ಮತ್ತಿತರರು ಉಪಸ್ಥಿತರಿದ್ದರು.