ಬೆಂಗಳೂರು; ತುಮಕೂರು ವಕೀಲರ ಸಂಘದ ಪದಾಧಿಕಾರಿಗಳು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ತುಮಕೂರು ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಬಿ.ಎಂ. ಶ್ಯಾಮ್ ಪ್ರಸಾದ್ ಅವರನ್ನು ಇಲ್ಲಿ ಭೇಟಿ ಮಾಡಿ ಚರ್ಚಿಸಿದರು.
ತುಮಕೂರು ಆಡಳಿತಾತ್ಮಕ ನ್ಯಾಯಮೂರ್ತಿಯಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್. ಕೆಂಪರಾಜಯ್ಯ ಉಪಾಧ್ಯಕ್ಷರಾದ ಎಂಎಲ್ ರವಿಗೌಡ ಪ್ರಧಾನ ಕಾರ್ಯದರ್ಶಿಯಾದ ಮಹೇಶ್ ಹೀರೆಹಳ್ಳಿ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಬೇಟಿ ಮಾಡಿದರು.
ತುಮಕೂರು ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಶುಭಾಶಯ ಅರ್ಪಿಸಲು ಭೇಟಿ ನೀಡಿದ್ದರು, ಹಾಗೂ ಇತ್ತೀಚಿಗೆ ತುಮಕೂರು ಜಿಲ್ಲೆಯ ನ್ಯಾಯಾಂಗ ಇಲಾಖೆ ಹೊಸದಾಗಿ ಜಾಗ ಪಡೆಯುವ ಸಲುವಾಗಿ ನಡೆಯುತ್ತಿರುವ ಹೋರಾಟದ ಬಗ್ಗೆಯೂ ಮಾಹಿತಿ ನೀಡಿದರು. ಈ ಬಗ್ಗೆ ನ್ಯಾಯಮೂರ್ತಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ತಿಳಿಸಿದರು .
ಸಂಘದ ಪ್ರತಿನಿಧಿಗಳು ನ್ಯಾಯಮೂರ್ತಿಗೆ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಉಪಾಧ್ಯಕ್ಷ ಎಂ.ಎಲ್. ರವಿಗೌಡ, ಪ್ರಧಾನ ಕಾರ್ಯದರ್ಶಿ ಮಹೇಶ್ ಹಿರೇಹಳ್ಳಿ, ಜಂಟಿ ಕಾರ್ಯದರ್ಶಿ ಟಿ.ಎಂ. ಧನಂಜಯ, ಖಜಾಂಚಿ ಸಿಂಧು ಬಿ.ಎಂ. ಸೇರಿದಂತೆ ಕಾರ್ಯಕಾರಿ ಮಂಡಳಿಯ ಸದಸ್ಯರಾದ ಗೋವಿಂದರಾಜು ಪಿ, ಡಿ.ಎ. ಜಗದೀಶ್, ಶ್ರೀನಿವಾಸಮೂರ್ತಿ ಕೆ.ವಿ., ಶ್ರೀನಿವಾಸಮೂರ್ತಿ ವಿ.ಕೆ., ಸುರೇಶ್ ಎಸ್., ಪದ್ಮಶ್ರೀ ಸಿ.ಆರ್., ಸೇವಾಪ್ರಿಯ ಜೆ.ಎಸ್. ಮತ್ತು ಇತರರು ಭಾಗವಹಿಸಿದ್ದರು.