ಗುಬ್ಬಿ
ಸಚಿವ ಸಂಪುಟದಲ್ಲಿ ಹಳೆ ಮೈಸೂರು ಪ್ರಾಂತ್ಯದ ಒಕ್ಕಲಿಗ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡದೆ ಕಡೆಗಣಿಸಲಾಗಿದೆ ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಮಸಾಲೆ ಜಯರಾಮ್ ಬೇಸರ ವ್ಯಕ್ತಪಡಿಸಿದರು.
ತಾಲೂಕಿನ ಸಿ.ಎಸ್.ಪುರ ಹೋಬಳಿ ಅಂಕಳಕೊಪ್ಪ ಗ್ರಾಮದಲ್ಲಿ ಹೇಮಾವತಿ ನಾಲಾ ವಿಶೇಷ ಅಭಿವೃದ್ಧಿ ಯೋಜನೆಯಲ್ಲಿ ೨ ಕೋಟಿ ವೆಚ್ಚದ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಪ್ರಾದೇಶಿಕ ಮತ್ತು ಜಾತಿ ಆಧಾರಿತ ಸಚಿವ ಸ್ಥಾನ ನೀಡುವ ಬಗ್ಗೆ ಮುಖ್ಯಮಂತ್ರಿಗಳು ಮುಂದಿನ ಸಚಿವ ಸಂಪುಟದಲ್ಲಿ ಆಲೋಚಿಸಿ ಹಳೆ ಮೈಸೂರು ಪ್ರಾಂತ್ಯದ ಒಕ್ಕಲಿಗ ಸಮುದಾಯದ ಶಾಸಕರಿಗೆ ಆದ್ಯತೆ ನೀಡಬೇಕು.
ಮೈಸೂರು,ಮಂಡ್ಯ,ಹಾಸನ,ಮತ್ತು ತುಮಕೂರು ಈ ನಾಲ್ಕು ಜಿಲ್ಲೆಯ ಒಕ್ಕಲಿಗ ಸಮುದಾಯದ ಒಬ್ಬ ಶಾಸಕರಿಗಾದರು ಸಚಿವ ಸ್ಥಾನ ನೀಡಬೇಕಿತ್ತು ಎಂಬ ಅಭಿಪ್ರಾಯವು ಇಡೀ ಒಕ್ಕಲಿಗ ಸಮುದಾಯದ ಮುಖಂಡರು ಪಕ್ಷಾತೀತವಾಗಿ ಚರ್ಚಿಸುತ್ತಿದ್ದಾರೆ ಎಂದರು.
ನೂತನ ಮುಖ್ಯಮಂತ್ರಿಗಳು ಮಾಜಿ ಪ್ರಧಾನಿ ದೇವೇಗೌಡರನ್ನು ಅವರ ನಿವಾಸಕ್ಕೆ ತೆರಳಿ ಭೇಟಿ ಮಾಡಿರುವುದು ಬಿಜೆಪಿ ಕಾರ್ಯಕರ್ತರಲ್ಲಿ ಬೇಸರ ತಂದಿದೆ ಕಾರಣ ಚುನಾವಣಾ ಸಮಯದಲ್ಲಿ ಪಕ್ಷಕ್ಕಾಗಿ ಹೋರಾಟ ಮಾಡಿ ಅಧಿಕಾರಕ್ಕೆ ತಂದ ಕಾರ್ಯಕರ್ತರಿಗೆ ನೋವುಂಟು ಮಾಡಿದ್ದು ಈ ವಿಚಾರದಲ್ಲಿ ಪ್ರೀತಮ್ ಗೌಡರಿಗೂ ಬೇಸರ ವಿದ್ದು ನಾನು ಸಹ ಅವರನ್ನು ಬೆಂಬಲಿಸುತ್ತೇನೆ ಎಂದು ತಿಳಿಸಿದರು.
ತುಮಕೂರು ಜಿಲ್ಲೆಗೆ ಇಬ್ಬರು ಸಚಿವರನ್ನು ಮಾಡಿರುವುದು ಹೆಮ್ಮೆಯ ವಿಷಯವಾಗಿದೆ ಜೊತೆಗೆ ಸಚಿವರಾದ ಜೆ.ಸಿ ಮಾಧುಸ್ವಾಮಿ ಯವರನ್ನು ಜಿಲ್ಲಾ ಉಸ್ತುವಾರಿ ಯಾಗಿ ಮುಂದುವರಿಸಲಾಗಿದ್ದು ಜಿಲ್ಲೆಯು ಮತ್ತಷ್ಟು ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಾವಿನಹಳ್ಳಿ ಗ್ರಾಪಂ ಅಧ್ಯಕ್ಷ ಜೆ.ವಿ.ಲೋಕೇಶ್, ಬಿಜೆಪಿ ಹೋಬಳಿ ಘಟಕದ ಅಧ್ಯಕ್ಷ ರವಿ,ವಿ.ಎಸ್.ಎಸ್.ಎನ್ ಅಧ್ಯಕ್ಷ ಬಿ.ಎಸ್.ನಾಗರಾಜು, ಮಹೇಶ್,ಮದುವೆ ಮನೆ ಕುಮಾರ್,ಸದಾಶಿವು,ಸುರೇಶ್,ದಿನೇಶ್ ಇನ್ನಿತರರು ಹಾಜರಿದ್ದರು.
9 ಗುಬ್ಬಿ ಫೋಟೋ 01: ಗುಬ್ಬಿ ತಾಲೂಕಿನ ಸಿ.ಎಸ್.ಪುರ ಹೋಬಳಿ ಅಂಕಳಕೊಪ್ಪ ಗ್ರಾಮದಲ್ಲಿ ಹೇಮಾವತಿ ನಾಲಾ ವಿಶೇಷ ಅಭಿವೃದ್ಧಿ ಯೋಜನೆಯಲ್ಲಿ ೨ ಕೋಟಿ ವೆಚ್ಚದ ಸಿ.ಸಿ.ರಸ್ತೆ ಕಾಮಗಾರಿಗೆ ತುರುವೇಕೆರೆ ಶಾಸಕ ಮಾಸಲೆ ಜಯರಾಮ್ ಭೂಮಿಪೂಜೆ ನೆರವೇರಿಸಿದರು.