ಕರ್ನಾಟಕ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದು ಎಂದು ಸೂಚನೆ ನೀಡಲಾಗಿದೆ.
ಜೊತೆಗೆ ಇಂತಹ ಕಾಣಿಕೆಗಳ ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದು ಎಂದು ರಾಜ್ಯ ಸರ್ಕಾರವು ಸಲಹೆ ನೀಡಿದೆ. ಸಂಬಂಧಪಟ್ಟ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಎಲ್ಲಾ ಸಂಸ್ಥೆಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಅಧಿಕಾರಿಗಳಿಗೆ ಸೂಚಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಆದೇಶ ಹೊರಡಿಸಿದ್ದಾರೆ.
ಸಭೆ-ಸಮಾರಂಭಗಳಲ್ಲಿ ಅತಿಥಿಗಳಿಗೆ ಇತರ ಕೊಡುಗೆಯ ಬದಲು ಕನ್ನಡ ಪುಸ್ತಕಗಳನ್ನು ನೀಡುವ ಸಲಹೆಗೆ ಪೂರಕವಾಗಿ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.