ಜಸ್ಟ್ ನ್ಯೂಸ್

ಅನರ್ಹರಿಗೆ ಅನ್ಯಾಯವಾಗಲು ಬಿಡುವುದಿಲ್ಲ; ಸಚಿವ  ಕೆ.ಎಸ್.ಈಶ್ವರಪ್ಪ

ಅನರ್ಹರಿಗೆ ಯಾವುದೇ ಕಾರಣಕ್ಕೂ ಅನ್ಯಾಯ ಮಾಡುವುದಿಲ್ಲ. ಅವರಿಂದಲೇ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ಸಚಿವ  ಕೆ.ಎಸ್.ಈಶ್ವರಪ್ಪ ಹೇಳಿದರು.

ತುಮಕೂರು ಜಿಲ್ಲೆ ತುರುವೇಕೆರೆ ವಿರಕ್ತ ಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಪಟ್ಟಾಧಿಕಾರದ ರಜತ ಮಹೋತ್ಸವದಲ್ಲಿ ಭಾಗವಹಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.

ಮೈತ್ರಿ ಸರ್ಕಾರದಿಂದ ಹೊರ ಬಂದಿದ್ದಕ್ಕಾಗಿಯೇ ಸರ್ಕಾರ ರಚನೆಯಾಗಿದೆ. ಅವರಿಗೆ ಅನ್ಯಾಯವಾಗುವ ರೀತಿಯಲ್ಲಿ ನಡೆದುಕೊಳ್ಳುವುದಿಲ್ಲ.  ಅನರ್ಹರು ಹೇಗೆ ಹೇಳುತ್ತಾರೋ, ಅದೇ ರೀತಿ ಅವರಿಗೆ ಬೆಂಬಲ ಕೊಡುತ್ತೇವೆ. ಸುಪ್ರೀಂಕೋರ್ಟ್‌ನಲ್ಲಿ ಏನು ತೀರ್ಪು ಬರುತ್ತದೆ ಎಂಬುದು ಗೊತ್ತಿಲ್ಲ ಎಂದು ತಿಳಿಸಿದರು.

ಪತ್ನಿ, ಮಕ್ಕಳು, ಕುಟುಂಬದವರನ್ನು ಬಿಟ್ಟು ಒಂದು ದಿನವೂ ಇರಲು ನಮಗೆ ಸಾಧ್ಯವಾಗುವುದಿಲ್ಲ. ಆದರೆ ಸ್ವಾಮೀಜಿ ಎಲ್ಲವನ್ನು ತ್ಯಜಿಸಿ ಸಮಾಜಕ್ಕಾಗಿ 25 ವರ್ಷಗಳ ಕಾಲ ಶ್ರಮಿಸಿದ್ದಾರೆ ಎಂದು ಶ್ಲಾಘಿಸಿದರು.

Comment here