ತುಮಕೂರು ಲೈವ್

ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳ ಬಂಧನ

ಮಧುಗಿರಿಯಿಂದ ತುಮಕೂರಿಗೆ ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 65 ಸಾವಿರ ರೂಪಾಯಿ ಮೌಲ್ಯದ 10 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ತುಮಕೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನಂ ವಂಶಿಕೃಷ್ಣ ಮಧುಗಿರಿಯಿಂದ ತುಮಕೂರಿಗೆ ಬರುತ್ತಿದ್ದ ಕೆಂಪು ಕಾರನ್ನು ತಡೆದು ಪರಿಶೀಲಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹೇಳಿದರು.
ಬಂಧಿತರನ್ನು ಮೊಕ್ದೋಂ ಷರೀಪ್, ನಹೀಮ್ ಅಹಮದ್, ಶಮೀರ್ ಪಾಷಾ ಎಂದು ಹೇಳಿದರು.

ಇಬ್ಬರು ಆರೋಪಿಗಳು ಪರಾರಿಯಾಗಿದ್ದು ಅವರಿಗಾಗಿ ಶೋಧಕಾರ್ಯ ನಡೆದಿದೆ. ಪರಾರಿಯಾಗಿರುವವರನ್ನು ಸಾಧಿಕ್, ಸಲ್ಮಾನ್ ಎಂದು ಗುರುತಿಸಲಾಗಿದೆ.
ಬಂಧಿತರಿಂದ ಒಂದು ಡ್ರಾಗರ್, ಮತ್ತು ಗಾಂಜಾ ಸಾಗಾಟಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಇದೇ ವೇಳೆ ಕೊರಟಗೆರೆ ತಾಲೂಕಿನಲ್ಲಿ 25 ವರ್ಷಗಳ ಹಿಂದೆ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಸಿದ್ದಹನುಮಯ್ಯನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದರು.

Comment here