ಸಾರಿಗೆ ಬಸ್ಸೊಂದು ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ನಜ್ಜುಗುಜ್ಜಾಗಿರುವ ಘಟನೆ ಹೊಳಲ್ಕೆರೆ ತಾಲೂಕಿನ ಶಿವಗಂಗಾ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.
ಕಾರಿನಲ್ಲಿದ್ದ ಚಿತ್ರದುರ್ಗ ಜಿಲ್ಲಾಧಿಕಾರಿ ವಿನೋತ್ ಪ್ರಿಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲಾದಿಕಾರಿಗಳ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಚಿತ್ರದುರ್ಗದಿಂದ ಹೊಳಲ್ಕೆರೆಗೆ ಬರುತ್ತಿದ್ದ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ರಸ್ತೆಯಲ್ಲಿದ್ದ ಹಸುವನ್ನು ತಪ್ಪಿಸಲು ಹೋಗಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿದ್ದ ವಿನೋತ್ ಪ್ರಿಯಾ, ಡ್ರೈವರ್ ಹಾಗೂ ಗನ್ ಮ್ಯಾನ್ ಸಿನಿಮೀಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.