ಹುಲಿಯೂರುದುರ್ಗ: ಹೋಬಳಿ ಹುನುಗನಹಳ್ಳಿ ಗ್ರಾಮದಲ್ಲಿ ಅನೇಕ ದಿನಗಳಿಂದ ಜನರನ್ನು ಭಯಭೀತಗೊಳಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ.
ಶಿವರಾಮು ಅವರ ಜಮೀನಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟಿದ್ದರು
ಬೋನಿಗೆ ಏಳು ವರ್ಷದ ಹೆಣ್ಣು ಚಿರತೆ ಸೆರೆ ಸಿಕ್ಕಿದೆ. ಅದನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದು ಅರಣ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.