ತುಮಕೂರು: ಗುಜರಾತಿನಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಮಂತ್ರಕ್ಕೆ ಸಿಕ್ಕ ಗೆಲುವು ಆಗಿದೆ ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಶಾಸಕ ಬಿ.ಸುರೇಶಗೌಡ ಹೇಳಿದ್ದಾರೆ.
ಅಭಿವೃದ್ಧಿಗಷ್ಟೇ ಜನ ಮನ್ನಣೆ ಹಾಕುತ್ತಾರೆ ಎಂಬುದನ್ನು ಎತ್ತಿ ತೋರಿಸಿದ್ದಾರೆ. ಮೋದೀಜಿ ಅವರು ಹೇಳಿರುವಂತೆ ಬಿಜೆಪಿಯ ಪ್ರತಿ ಕಾರ್ಯಕರ್ತನು ಅಭಿವೃದ್ಧಿಗಾಗಿ ದುಡಿಯುತ್ತಾನೆ. ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೂ ಪರಿಣಾಮ ಬೀರಲಿದೆ. ಡಬ್ಬಲ್ ಎಂಜಿನ್ ಸರ್ಕಾರವೇ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.