Public story
ತುಮಕೂರಿನ ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿದೆ.
2021-2022ನೇ ಸಾಲಿನ ಮಾರ್ಚ್ ಏಪ್ರಿಲ್ ತಿಂಗಳಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ದಿನಾಂಕ 13/03/2022 ರಂದು ಭಾನುವಾರ ಕಾಲೇಜಿನಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ.
ಈ ಕಾರ್ಯಾಗಾರದಲ್ಲಿ ರಾಜ್ಯಮಟ್ಟದ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಪರೀಕ್ಷೆಗಾಗಿ ವಿಷೇಶ ತರಗತಿಗಳು ಇರಲಿವೆ. MATHS &SCIENCE ವಿಷಯಗಳಿಗೆ ಸಂಬಂಧಿಸಿದಂತೆ ಉಪಯುಕ್ತ ಮಾಹಿತಿ ಗಳನ್ನು ನೀಡಲಾಗುವುದು.
ಈ ಕಾರ್ಯಾಗಾರಕ್ಕೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಲು ವಿನಂತಿಸಲಾಗಿದೆ.
ಈ ಕಾರ್ಯಾಗಾರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಕಾಲೇಜಿನ ವತಿಯಿಂದ ವಾಹನ ಸೌಲಭ್ಯವನ್ನು ಒದಗಿಸಲಾಗಿದೆ.
ಕಾರ್ಯಾಗಾರದಲ್ಲಿ ಭಾಗವಹಿಸುವ ಆಸಕ್ತ ವಿದ್ಯಾರ್ಥಿಗಳು/ ಪೋಷಕರು ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ ಈ ಕೆಳಕಂಡ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಸಲು 99721 75689, 95900 35894 ಪ್ರಕಟಣೆ ತಿಳಿಸಿದೆ.