Publicstory/prajayoga
ತುಮಕೂರು: ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿ ಕುರುಬರಹಳ್ಳಿ ಗ್ರಾಮದಲ್ಲಿ ಆಗಸ್ಟ್ 20ರ ಶನಿವಾರ ಜರುಗಲಿರುವ ‘ಜಿಲ್ಲಾಧಿಕಾರಿ ನಡೆ ಹಳ್ಳಿಕಡೆ’ ಅಭಿಯಾನದಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಭಾಗವಹಿಸಲಿದ್ದಾರೆ ಎಂದು ತಹಶಿಲ್ದಾರ್ ಮಮತಾ.ಎಂ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮತ್ತು ಶಿರಾ ತಾಲೂಕು ತಹಶಿಲ್ದಾರ್ ಅವರು ಕುರುಬರಹಳ್ಳಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿ, ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ.
ಮುಂದುವರೆದು ತುಮಕೂರು ತಾಲೂಕಿನ ಬೆಳ್ಳಾವಿ ಹೋಬಳಿ ಚಿಕ್ಕಸೀಬಿ ಗ್ರಾಮ, ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅರಸಾಪುರ ಕಂದಾಯ ಗ್ರಾಮ, ಮಾದೇನಹಳ್ಳಿ ಮಜರೆ, ಗಿಡ್ಡಚಿಕ್ಕನಹಳ್ಳಿ ಗ್ರಾಮ, ಗುಬ್ಬಿ ತಾಲೂಕು ಚೇಳೂರು ಹೋಬಳಿ ಚಿಂದಿಗೆರೆ ಗ್ರಾಮ, ಕುಣಿಗಲ್ ತಾಲೂಕು ಅಮೃತೂರು ಹೋಬಳಿ ಮಾರ್ಕೋನಹಳ್ಳಿ ಗ್ರಾಮ, ತಿಪಟೂರು ತಾಲೂಕು ಕಸಬಾ ಹೋಬಳಿ ರಾಮಶೆಟ್ಟಿಹಳ್ಳಿ ಗ್ರಾಮ, ತುರುವೇಕೆರೆ ತಾಲ್ಲೂಕು ದಬ್ಬೇಘಟ್ಟ ಹೋಬಳಿ ದಬ್ಬೇಘಟ್ಟ ಗ್ರಾಮ, ಚಿ.ನಾ.ಹಳ್ಳಿ ತಾಲೂಕು ಕಂದಿಕೆರೆ ಹೋಬಳಿ ಬಡಕೆಗುಡ್ಲು ಗ್ರಾಮ, ಮಧುಗಿರಿ ತಾಲೂಕು ಕೊಡಿಗೇನಹಳ್ಳಿ ಹೋಬಳಿ ಮುದ್ದೇನಹಳ್ಳಿ ಗ್ರಾಮ, ಪಾವಗಡ ತಾಲೂಕು ವೈ.ಎನ್.ಹೊಸಕೋಟೆ ಹೋಬಳಿ ಆರ್.ಡಿ.ರೊಪ್ಪ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಕಡೆ ಅಭಿಯಾನದಲ್ಲಿ ಆಯಾ ತಾಲೂಕು ತಹಶಿಲ್ದಾರ್ಗಳು ಭಾಗವಹಿಸಿ ಗ್ರಾಮ ವಾಸ್ತವ್ಯ ಮಾಡಿ, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.