Publicstory/prajayoga
ತುಮಕೂರು: ಮುಂಬರುವ ಬಿಬಿಎಂಪಿ , ಜಿಪಂ, ತಾಪಂ ಹಾಗೂ 2023ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸ್ಥಾಪಿಸಿದ ರಿಪಬ್ಲಿಕನ್ ಪಾರ್ಟಿ ಅಫ್ ಇಂಡಿಯಾ ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ಆಗಸ್ಟ್ 26 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಆರ್‌ಪಿಐ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಿಂದು ಸುಮಾರು 1ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ತುಮಕೂರು ಜಿಲ್ಲೆಯಲ್ಲಿ 2 ಸಾವಿರಕ್ಕೂ ಅಧಿಕ ಜನರು ಪಾಲ್ಗೊಳ್ಳಲಿದ್ದಾರೆ ಎಂದರು.
ಆಗಸ್ಟ್ 26ರ ಶುಕ್ರವಾರ ನಡೆಯುವ ರಿಪಬ್ಲಿಕನ್ ಪಾರ್ಟಿ ಅಫ್ ಇಂಡಿಯಾದ ರಾಜ್ಯ ಕಾರ್ಯಕರ್ತರ ಸಮಾವೇಶವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ರಾಮದಾಸ್ ಆಠಾವಳೆ ಉದ್ಘಾಟಿಸುವರು. ಇವರ ಜೊತೆಗೆ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿರುವ ಚಿಕ್ಕಬಳ್ಳಾಪುರದ ಜಿ.ಸಿ.ವೆಂಕಟರಾಮ್ ಮತ್ತು ಎಂ.ಮುನಿಸ್ವಾಮಿ ಅವರುಗಳು ಹಾಗೂ ಆರ್ಪಿಐನ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಅಧ್ಯಕ್ಷರುಗಳು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬಾರಿ ಆರ್ಪಿಐ ರಾಜ್ಯದಲ್ಲಿ ರಾಜಕೀಯ ಖಾತೆ ತೆರೆಯುವ ಉದ್ದೇಶ ಹೊಂದಿದ್ದು, ಇದರ ಭಾಗವಾಗಿ ಈ ಸಮಾವೇಶ ಮಹತ್ವ ಪಡೆದುಕೊಂಡಿದೆ ಎಂದು ಡಾ.ಎಂ.ವೆಂಕಟಸ್ವಾಮಿ ತಿಳಿಸ್ಲಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮಯ್ಯ, ರಾಜ್ಯ ಕಾರ್ಯಕಾರಿಣಿ ಸದಸ್ಯ ಸಾಯಿಪ್ರಕಾಶ್, ಹಾಸನ ಜಿಲ್ಲಾಧ್ಯಕ್ಷ ಸತೀಶ್, ತುಮಕೂರು ಜಿಲ್ಲಾಧ್ಯಕ್ಷ ನಟರಾಜು, ರಾಜಣ್ಣ ಯಲದಬಾಗಿ, ರಾಮಯ್ಯ ಎಂ ಮತ್ತಿತರರು ಉಪಸ್ಥಿತರಿದ್ದರು.