Publicstory/Prajayoga
ತುಮಕೂರು : ಶ್ರೀ ಸಿದ್ದಗಂಗಾ ಮಠದಲ್ಲಿ ಸೆಪ್ಟೆಂಬರ್ 17ರಂದು “ಯೋಗದಿಂದ ರೋಗ ಮುಕ್ತ, ಯೋಗವನ್ನು ಸಾರಿ ವಿಶ್ವ ದಾಖಲೆ ಮಾಡೋಣ” ಎಂಬ ಘೋಷ ವಾಕ್ಯದೊಂದಿಗೆ ನಡೆಯುವ ಯೋಗ ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿಗಳು ಸೇರಿದಂತೆ ಸುಮಾರು 15ಸಾವಿರ ಮಂದಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಯನ್ನು ಕೈಗೊಳ್ಳುವಂತೆ ಜಿಲ್ಲಾ ಆಯುಷ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದ್ದಾರೆ.
ಅಂದು ನಡೆಯಲಿರುವ ಯೋಗ ಕಾರ್ಯಕ್ರಮದಲ್ಲಿ ವಿಶ್ವ ಯೋಗ ದಿನಾಚರಣೆ ಸಮಿತಿ, ಪತಂಜಲಿ ಯೋಗ ಶಿಕ್ಷಣ ಸಮಿತಿ, ಅಶ್ವಿನಿ ಆಯುರ್ವೇದ, ಇಂಜಿನಿಯರಿಂಗ್, ಮೆಡಿಕಲ್ ಕಾಲೇಜು, ಬ್ರಹ್ಮಕುಮಾರಿ ಸಂಸ್ಥೆ, ಪದವಿಧರ ಆಯುಷ್ ವೈದ್ಯರ ಸಂಘ, ಆರೋಗ್ಯ ಭಾರತಿ ಸಂಸ್ಥೆ, ಕಾಲೇಜು ಶಿಕ್ಷಣ ಸಂಸ್ಥೆಗಳು, ಜಿಲ್ಲಾ ಮಟ್ಟದ ಎಲ್ಲಾ ಇಲಾಖಾವಾರು ಅಧಿಕಾರಿಗಳು ಸೇರಿದಂತೆ ವಿವಿಧ ಸಂಸ್ಥೆಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಭಾಗವಹಿಸುವ ಯೋಗಪಟುಗಳು www.yogathon2022.com ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.