ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹಿರಾಬೆನ್ ಅವರ ಅಂತ್ಯ ಸಂಸ್ಕಾರ ಇಲ್ಲಿನ ಗಾಂಧಿನಗರದಲ್ಲಿರುವ ಚಿತಾಗಾರದಲ್ಲಿ ನಡೆಯಿತು.
ತಾಯಿಯ ಪಾರ್ಥಿವ ಶರೀರದ ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರು ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.
ನೂರು ವರ್ಷಗಳ ಶ್ರೇಷ್ಠ ಪ್ರಯಾಣ ಮುಗಿದಿದೆ. ಅಮ್ಮನಲ್ಲಿ ನಾನು ತ್ರಿಮೂರ್ತಿಗಳನ್ನು ಕಂಡಿದ್ದೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.