ಚಿಕ್ಕಬಳ್ಳಾಪುರ: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತರೊಬ್ಬ ರಿಗೆ ಟಿಕೆಟ್ ನೀಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಕ್ಷೇತ್ರದ ಬಗ್ಗೆ ಎಲ್ಲರಿಗೂ ಕುತೂಹಲ ಹೆಚ್ಚಿದೆ. ನಮ್ಮ ಮನೆಯವರಿಗೆ ಟಿಕೆಟ್ ಕೊಡುವುದಿಲ್ಲ ಎಂಬ ಮಾತಿಗೆ ಈಗಲೂ ಬದ್ಧ ಎಂದರು.
ಹಾಸನ ಕ್ಚೇತ್ರಕ್ಕೆ ಜಿಲ್ಲಾ ಪಂಚಾಯತ್ ಸದಸ್ಯರು, ನಗರಸಭೆ ಸದಸ್ಯರು ಸಹಿತ ಮುನ್ನೂರು ಮುಖಂಡರ ಸಭೆಯನ್ನು ಕರೆದಿದ್ದೇನೆ. ಎಲ್ಲರ ಅಭಿಪ್ರಾಯ ಪಡೆದು ಟಿಕೆಟ್ ನಿರ್ಧರಿಸುವೆ ಎಂದರು.