ತುರುವೇಕೆರೆ: ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಶಕ್ತಿ ಯೋಜನೆಯನ್ನು ನಮ್ಮ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿ ನುಡಿದಂತೆ ನಡೆದಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕಾಂತರಾಜು ಬಿ.ಎಂ. ತಿಳಿಸಿದರು.
ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಪಕ್ಷದಿಂದ ಸೋಮವಾರ ಆಯೋಜಿಸಿದ್ದ ಸರ್ಕಾರದ ಶಕ್ತಿ ಯೋಜನೆಯ ಮಹಿಳೆಯರಿಗೆ ಸರ್ಕಾರಿ ಬಸ್ ಉಚಿತ ಪ್ರಯಾಣದ ಮಹಿಳಾ ಪ್ರಯಾಣಿಕರಿಗೆ ಸಿಹಿ ನೀಡಿ ಶುಭಕೋರಿ ಮಾತನಾಡಿದರು.
ಕಾಂಗ್ರೆಸ್ ಪಕ್ಷ ನುಡಿದಂತೆ ನೆಡೆಯುವ ಪಕ್ಷವಾಗಿದೆ. ಚುನಾವಣೆಯ ಪ್ರನಾಳಿಕೆಯಲ್ಲಿ ತಿಳಿಸಿದಂತೆ 5 ಯೋಜನೆಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಈಡೇರಿಸಲಾಗಿದೆ. ಕುಟುಂಬದ ಮಹಿಳಾ ಸದಸ್ಯೆಗೆ ತಿಂಗಳಿಗೆ 2 ಸಾವಿರ, ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್, ನಿರೂದ್ಯೋಗ ಯುವಕ, ಯುವತಿಯರಿಗೆ ನಿರುದ್ಯೋಗ ಭತ್ಯೆ, ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೂ 10 ಕೆ.ಜಿ ಅಕ್ಕಿ ನೀಡುವ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಸದ್ಯದಲ್ಲಿಯೇ ಈಡೇರಿಸಲಿದೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನದಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೆಪಿಸಿಸಿ ಪ್ರದಾನ ಕಾರ್ಯದರ್ಶಶಿ ಮುರುಳಿಧರ ಹಾಲಪ್ಪ ಮಾತನಾಡಿ, ಪ್ರತಿ ಪಕ್ಷದವರು ಎಷ್ಟೇ ಟೀಕೆ ಟಿಪ್ಪಣಿ ಮಾಡಿದರು ಸಹ ನಮ್ಮ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಮೊದಲನೆಯದಾಗಿ ಶಕ್ತಿ ಯೋಜನೆಯನ್ನು ಈಡೇರಿಸಿದೆ. ಈ ಶಕ್ತಿ ಯೋಜನೆಯಿಂದ ರಾಜ್ಯಾದ್ಯಂತ 42 ಲಕ್ಷ ಮಂದಿ ಮಹಿಳೆಯರಿಗೆ ಅನುಕೂಲವಾಗಲಿದೆ. ಈ ಯೋಜನೆಯನ್ನು ರಾಜ್ಯದ ಮಹಿಳೆಯರು ಸದೂಪಯೋಗ ಪಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ಪ್ರಸನ್ನಕುಮಾರ್, ನಾಗೇಶ್ ಗೋಣಿತುಮಕೂರು ಲಕ್ಷ್ಮೀಕಾಂತ್, ಎನ್.ಆರ್.ಜಯರಾಮ್, ಶ್ರೀನಿವಾಸ್, ಶಿವರಾಜು, ಶಶಿಶೇಖರ್, ನಂಜುಂಡಪ್ಪ, ಹನುಮಂತಯ್ಯ, ತ್ರೈಲೋಕಿನಾಥ್, ರೇವಣ್ಣ, ವೇಣುಗೊಪಾಲ್, ಕೆಂಪರಾಜು, ಲಕ್ಷ್ಮಿದೇವಮ್ಮ, ಕಮಲಸ್ವರ್ಣಕುಮಾರ್, ಮಹಾಲಿಂಗಯ್ಯ, ಅರಳಿಕೆರೆ ಉದಯ್, ಬಸವರಾಜು ಸೇರಿದಂತೆ ಕಾರ್ಯಕರ್ತರು ಇದ್ದರು.