Public story
ತುಮಕೂರು:ಅಖಿಲ ಭಾರತ ಕಾಂಗ್ರೆಸ್ ಕಮಿಟಿ(ಎಐಸಿಸಿ)ಯ ಅಲ್ಪಸಂಖ್ಯಾತರ ಘಟಕದ ರಾಷ್ಟ್ರೀಯ ಸಂಯೋಜಕರಾಗಿ ಮಾಜಿ ಶಾಸಕ ಹಾಗೂ ಹೆಚ್.ಎಂ.ಎಸ್.ತಾಂತ್ರಿಕ ಮಹಾವಿದ್ಯಾಲಯದ ನಿರ್ದೇಶಕರಾದ ಡಾ.ಎಸ್.ರಫೀಕ್ ಅಹಮದ್ ಅವರನ್ನು ನೇಮಕ ಮಾಡಲಾಗಿದೆ.
ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸಲ್ಲಿಸಿದ ಅಲ್ಪಸಂಖ್ಯಾತರ ವಿಭಾಗದ ಉಪಾಧ್ಯಕ್ಷರು, ಸಂಯೋಜಕರು ಹಾಗೂ ಸಹ ಸಂಯೋಜಕರು ಸೇರಿದಂತೆ ಪದಾಧಿಕಾರಿಗಳ ಪಟ್ಟಿಗೆ ಅಖಿಲ ಭಾರತ ಕಾಂಗ್ರೆಸ್ ಕಮಿಟಿಯ ರಾಷ್ಟ್ರಿಯ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅನುಮೋಧನೆ ನೀಡಿದ್ದಾರೆ.
ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿರುವ ಡಾ.ರಫೀಕ್ ಅಹಮದ್ 2013ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ,ಶಾಸಕರಾಗಿ ಕೆಲಸ ಮಾಡಿದ್ದರು.ಕಳೆದ 2023ರ ಚುನಾವಣೆಯಲ್ಲಿ ಪಕ್ಷದ ಟಿಕೇಟ್ ಕೈತಪ್ಪಿದ್ದರೂ ಪಕ್ಷ ತೊರೆಯದೆ ಪಕ್ಷ ನಿಷ್ಠೆ ತೋರಿದ್ದ ಇವರಿಗೆ ಎಐಸಿಸಿ ಅಧ್ಯಕ್ಷರು ಅಲ್ಪಸಂಖ್ಯಾತರ ಘಟಕದ ರಾಷ್ಟ್ರೀಯ ಸಂಯೋಜಕರಾಗಿ ನೇಮಕ ಮಾಡಿದ್ದಾರೆ.