ತುಮಕೂರು : ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 99ಕೋಟಿ ರೂ. ಅಂದಾಜು ವೆಚ್ಚದಲ್ಲಿ 100 ಹಾಸಿಗೆಗಳ್ಳುಳ್ಳ ಕ್ಯಾನ್ಸರ್ ಆಸ್ಪತ್ರೆಯ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುತ್ತದೆ. 20 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆಗಳ್ಳುಳ್ಳತಾಯಿ-ಮಕ್ಕಳ ಆಸ್ಪತ್ರೆ'' ಹಾಗೂ 50 ಲಕ್ಷ ರೂ. ವೆಚ್ಚದಲ್ಲಿ 10 ಹಾಸಿಗೆಗಳ್ಳುಳ್ಳ
ಪೌಷ್ಠಿಕ ಪುನಃಶ್ಚೇತನ” ಕೇಂದ್ರಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿದೆ. 100 ಹಾಸಿಗೆಗಳುಳ್ಳ ತಾಯಿ ಮಕ್ಕಳ ಆಸ್ಪತ್ರೆಯನ್ನು 200 ಹಾಸಿಗೆಗಳುಳ್ಳ ತಾಯಿ ಮಕ್ಕಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಜಿ.ಪರಮೇಶ್ವರ್ ಅವರು ತಿಳಿಸಿದರು.
ಜಿಲ್ಲಾಡಳಿತ ವತಿಯಿಂದ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿಂದು 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ರಾಜಧಾನಿ ಬೆಂಗಳೂರಿಗೆ ಹೆಬ್ಬಾಗಿಲಿನಂತಿರುವ ತುಮಕೂರು ಭೌಗೋಳಿಕವಾಗಿ, ಸಾಂಸ್ಕøತಿಕವಾಗಿ, ಸಾಹಿತ್ಯಿಕವಾಗಿ, ಧಾರ್ಮಿಕವಾಗಿ ಹಾಗೂ ಶೈಕ್ಷಣಿಕವಾಗಿ ಅನೇಕ ಮಹತ್ವಗಳನ್ನು ಒಳಗೊಂಡಿರುವ ವಿಶಾಲವಾದ ಜಿಲ್ಲೆಯಾಗಿದೆ. ಮಧುಗಿರಿಯ ಏಕಶಿಲಾ ಬೆಟ್ಟ, ಕೈದಾಳ, ಶಿರಾ, ಮುಂತಾದ ಪ್ರಾಂತ್ಯಗಳು ಜಿಲ್ಲೆಯ ಚಾರಿತ್ರಿಕ ಮಹತ್ವವನ್ನು ಸಾರುತ್ತಿವೆ ಎಂದರು.
ಒಟ್ಟು 292 ಕಾಮಗಾರಿಗಳು ಪೂರ್ಣಗೊಂಡಿದ್ದು, 865 ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಸಕ್ತ ವರ್ಷದಲ್ಲಿ 2542 ಕಾಮಗಾರಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕರುಗಳಾದ ಜಿ.ಬಿ.ಜ್ಯೋತಿಗಣೇಶ್, ಸುರೇಶ್‍ಗೌಡ, ಪಾಲಿಕೆ ಮೇಯರ್ ಪ್ರಭಾವತಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಸಿಇಓ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಮಹಾನಗರ ಪಾಲಿಕೆ ಆಯುಕ್ತೆ ಅಶ್ವಿಜ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ಧಲಿಂಗಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.