Tumkuru: ಗ್ರಾಮೀಣ ಪ್ರದೇಶದಲ್ಲಿ ಸಮಸ್ಯೆಗಳಿದ್ದು ಪರಿಹಾರ ಕಂಡು ಕೊಳ್ಳುವಲ್ಲಿ ಜನರು ವಿಫಲಾರಾಗಿದ್ದಾರೆ. ಸಮುದಾಯ ಅಭಿವೃದ್ಧಿ ಕೇಂದ್ರಗಳು ಮತ್ತು ಸಮುದಾಯದ ಜನರ ಸಹಭಾಗಿತ್ವದ ಸಂಪನ್ಮೂಲ ಕ್ರೂಡೀಕರಣ ಮತ್ತು ಮೌಲ್ಯ ಮಾಪನ ಮುಖ್ಯವಾಗಿರುತ್ತದೆ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೋ.ವೈ.ಎನ್.ಸಿದ್ದಗೌಡ ತಿಳಿಸಿದರು.
ತುಮಕೂರು ವಿಶ್ವ ವಿದ್ಯಾನಿಲಯ ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ, ಸಂಶೋಧನಾ ವಿಭಾಗ ಮತ್ತು ಸಮುದಾಯ ಅಭಿವೃದ್ಧಿ ಕೇಂದ್ರದ ವತಿಯಿಂದ ದೊಮ್ಮನಕುಪ್ಪೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮುದಾಯದ ಅಭಿವೃದ್ದಿ ಕೇಂದ್ರದಿಂದ ಗ್ರಾಮಗಳಲ್ಲಿ ವಿನೂತನ ಕಾರ್ಯಕ್ರಮ ಹಮ್ಮಿಕೊಂಡು ವಿಶ್ವವಿದ್ಯಾಲಯ ಮತ್ತು ನೂತನ ಕ್ಯಾಂಪಸ್‍ನ ಸುತ್ತ ಮುತ್ತ ಗ್ರಾಮೀಣ ಸಮುದಾಯಗಳ ನಡುವೆ ಉತ್ತಮ ಬಾಂಧವ್ಯ ಏರ್ಪಟ್ಟು ಅಭಿವೃದ್ಧಿಗೆ ಪೂರಕವಾಗಲಿ ಎಂದು ಆಶಿಸಿದರು.
ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಪ್ರೊ. ಕೆ.ಜಿ. ಪರಶುರಾಮ, ಪರಿಸರ ಮತ್ತು ವನ್ಯಜೀವಿ ಸಂರಕ್ಷಣೆಯ ಜವಬ್ದಾರಿಯ ಮೂಲಕ ಹೆಚ್ಚು ಪರಿಣಾಮಕಾರಿಯಾಗಿ ಸುಸ್ಥಿರ ಸಮಾಜ ಅಭಿವೃದ್ಧಿಪಡಿಸಲು ವಿಶೇಷ ಉಪನ್ಯಾಸ, ಉಚಿತ ಆರೋಗ್ಯ ತಪಾಸಣ ಶಿಬಿರ ಆಯೋಜಿಸಲಾಗುವುದು. ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಶಿವಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷ ಶಿವಗಂಗಯ್ಯ, ದಾವಣಗೆರೆ ವಿಶ್ವವಿದ್ಯಾನಿಲಯದ ಸಹ ಪ್ರಾಧ್ಯಾಪಕ ಡಾ.ಲೋಕೇಶ್, ಶಿಕ್ಷಕ ದಿನೇಶ್, ಗ್ರಾಮ ಪಂಚಾಯಿತಿ ಸದಸ್ಯೆ ಭೈರಮ್ಮ ಮಾಕನಹಳ್ಳಿ ಮಠದ ಗಂಗಾಧರ ಸ್ವಾಮಿ ಉಪಸ್ಥಿತರಿದ್ದರು.