ತುಮಕೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನಾಳೆಯಿಂದ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂಬ ಮಾಹಿತಿ ಹೀಗಿದೆ.
ಏಪ್ರಿಲ್ 22 ರಂದು ಮಳೆನಾಡು ಪ್ರದೇಶವನ್ನ ಹೊಂದಿರುವ ಜಿಲ್ಲೆಗಳಾದ.. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಿಂಚು ಗುಡುಗಿನೊಂದಿಗೆ ಬಿರುಗಾಳಿ ಸಹಿತ ಮಳೆಯಾಗಲಿದೆ.
ಇನ್ನು, ಕರಾವಳಿ ಕರ್ನಾಟಕ ಮತ್ತು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿ ಸೇರಿದಂತೆ ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಏಪ್ರಿಲ್ 23 ರಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜೊತೆಗೆ ಉತ್ತರ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ, ಮೈಸೂರು, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 24 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 25 ರಂದು ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರಿನ ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಬಿರುಗಾಳಿ, ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮಿಂಚಿನೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 26 ರಂದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಲವೆಡೆ ಗಾಳಿಯೊಂದಿಗೆ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ ದಾವಣಗೆರೆ, ಕೋಲಾರ, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲೂ ಸಹ ಚದುರಿದಂತೆ ಮಿಂಚು-ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.