Friday, November 22, 2024
Google search engine
Homeತುಮಕೂರು ಲೈವ್ಬೋರ್‍ವೆಲ್, ಟ್ರ್ಯಾಕ್ಟರ್ ರಿಪೇರಿಗೆ ಅವಕಾಶ: ಸಚಿವ ಬಿ.ಸಿ.ಪಾಟೀಲ

ಬೋರ್‍ವೆಲ್, ಟ್ರ್ಯಾಕ್ಟರ್ ರಿಪೇರಿಗೆ ಅವಕಾಶ: ಸಚಿವ ಬಿ.ಸಿ.ಪಾಟೀಲ

Photo: Jp

Publicstory. in

Tumkuru: ಕೊರೊನಾ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಬಾಧಕವಾಗದಂತೆ ನಿಗಾವಹಿಸಲು ಕೃಷಿ ಚಟುವಟಿಕೆಗೆ ಪೂರಕವಾದ ಪರಿಕರಗಳು ಮತ್ತು ಬೋರ್‍ವೆಲ್, ಟ್ರ್ಯಾಕ್ಟರ್ ರಿಪೇರಿಗೆ ಅವಕಾಶ ಮಾಡಿ ಕೊಡಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಬೇಕಾದ ಬಿತ್ತನೆ ಬೀಜಗಳು, ಗೊಬ್ಬರ ಮತ್ತು ಇನ್ನಿತರ ಅವಶ್ಯಕ ಪರಿಕರಗಳ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ರೈತರು ನಿಶ್ಚಿಂತೆಯಿಂದ ಕೃಷಿ ಕಾಯಕ ಮುಂದುವರಿಸಲು ಮನವಿ ಮಾಡಿದರು.

ಹಣ್ಣು – ತರಕಾರಿಗಳನ್ನು ಹೆಚ್ಚಾಗಿ ಬೆಳೆಯುವ ಪ್ರದೇಶಗಳಲ್ಲಿ ಪ್ರತಿ ತಾಲ್ಲೂಕಿಗೆ ಒಂದರಂತೆ ಶೀತಲ ಶೇಖರಣ ಬೃಹತ್ ಘಟಕಗಳನ್ನು ನಿರ್ಮಾಣ ಮಾಡಬೇಕಾಗಿದೆ. ಎಪಿಎಂಸಿಗಳನ್ನು ಮತ್ತಷ್ಟು ಬಲಪಡಿಸಬೇಕಾಗಿದೆ ಎಂದರು.

ರಾಜ್ಯದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದ ಅನಾನಸ್ – ಕಲ್ಲಂಗಡಿ ಹಣ್ಣುಗಳನ್ನು ಬೆಳೆಯುತ್ತಾರೆ. ಸಮರ್ಪಕ ಪ್ರಮಾಣದಲ್ಲಿ ಮಾರಾಟವಾಗದ ಕಾರಣ ಅವುಗಳು ಕೊಳೆತು ಹೋಗುತ್ತಿವೆ. ಈ ಹಿನ್ನೆಲೆಯಲ್ಲಿ ಕೃಷಿಕರ ಪರಿಶ್ರಮ ವ್ಯರ್ಥವಾಗದಂತೆ ಮೌಲ್ಯವರ್ಧನಾ ಘಟಕಗಳ ಸ್ಥಾಪನೆಗೆ ಉದ್ದೇಶಿಸಲಾಗಿದೆ. ಇದರಿಂದ ಹಣ್ಣುಗಳ ಜ್ಯೂಸ್ ಮಾಡಿ ಹೆಚ್ಚು ಅವಧಿ ಬಾಳಿಕೆ ಬರುವ ಪ್ಯಾಕೇಟುಗಳ ಮೂಲಕ ಮಾರಾಟ ಮಾಡುವುದು ಸೂಕ್ತ ಎಂದರು.

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆಬೀಜ, ಗೊಬ್ಬರಗಳು, ಕೀಟನಾಶಕಗಳು ಇನ್ನಿತರ ಪರಿಕರಗಳನ್ನು ಪೂರೈಸಲು ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಎಲ್ಲಿಯಾದರೂ ಇವುಗಳ ಕಳಪೆ ಮಾರಾಟ ಕಂಡು ಬಂದು ರೈತರಿಗೆ ತೊಂದರೆಯಾದರೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು, ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಅವರ ಮೇಲೆ ಕಠಿಣ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.

ಕೃಷಿ ಇಲಾಖೆಯ ಜಾಗೃತ ದಳವನ್ನು ಕಟ್ಟೆಚ್ಚರದ ಸ್ಥಿತಿಯಲ್ಲಿಡಲಾಗಿದೆ. ಈಗಾಗಲೇ ರಾಜ್ಯದ ವಿವಿಧೆಡೆ ಸರಣಿ ದಾಳಿಗಳನ್ನು ನಡೆಸಿ ಕಳಪೆ ಬಿತ್ತನೆಬೀಜ, ಇನ್ನಿತರ ಪರಿಕರಗಳನ್ನು ಜಪ್ತಿ ಮಾಡಲಾಗಿದೆ.ಸಂಬಂಧಿಸಿದ ಅಂಗಡಿಗಳ ಲೈಸನ್ಸ್ ಗಳನ್ನು ಅಮಾನತ್ತಿನಲ್ಲಿಡಲಾಗಿದೆ. ಮಾಲೀಕರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದೆ ಎಂದು ವಿವರಿಸಿದರು.

ಲಾಕ್‍ಡೌನ್ ಹಿನ್ನೆಲೆಯಲ್ಲಿ ಹಣ್ಣು-ತರಕಾರಿಗಳನ್ನು ಆನ್‍ಲೈನ್ ಮೂಲಕ ಮಾರಾಟ ಮಾಡುವುದರಿಂದ ರೈತರಿಗೆ ಅನುಕೂಲವಾಗುವುದಿಲ್ಲ. ಟೊಮಟೊ ಬೆಲೆ ಕುಸಿತ ಕಂಡಿದ್ದು, ರೈತರು ನಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಸರ್ಕಾರ ರೈತರಿಗೆ ನೆರವಾಗಬೇಕು ಎಂದು ರೈತರೊಬ್ಬರು ಸಚಿವರಿಗೆ ಮನವಿ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

ಇನ್ಸ್ಪೆಕ್ಟರ್ ಸಲ್ಮಾನ್ ಕೆ ಎನ್ on ಕ್ರೀಡಾಕೂಟ ಝಲಕ್
Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?