Publicstory. in
ಬೆಂಗಳೂರು: ರಾಜ್ಯಸಭೆಗೆ ಅಚ್ಚರಿಯ ಹೆಸರುಗಳ ಘೋಷಣೆಯ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತು ನಡೆಯುವುದಿಲ್ಲ ಎಂಬ ಉತ್ತರ ರವಾನಿಸಿರುವ ಬಿಜೆಪಿ ಹೈ ಕಮಾಂಡ್, ಮತ್ತೇ ರಾಜ್ಯದಲ್ಲಿ ಪಕ್ಷದಲ್ಲಿ ಆಂತರಿಕ ಕಚ್ಚಾಟಕ್ಕೆ ಅವಕಾಶ ಮಾಡಿಕೊಟ್ಟಿದೆ.
ಕೊನೇ ಕ್ಷಣದಲ್ಲಿ ರಾಜ್ಯಸಭೆ ಚುನಾವಣೆಗೆ ಬಿಜೆಪ ಇಬ್ಬರು ಅಭ್ಯರ್ಥಿಗಳನ್ನು ಹೆಸರನ್ನು ಪ್ರಕಟಿಸಿದೆ.
ಬೆಳಗಾವಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಈರಣ್ಣ ಕಡಾಡಿ ಮತ್ತು ಬಳ್ಳಾರಿ ಜಿಲ್ಲೆಯ ಉಸ್ತುವಾರಿ ವಹಿಸಿರುವ ಅಶೋಕ್ ಗಸ್ತಿ ಅವರಿಗೆ ರಾಜ್ಯ ಸಭಾ ಟಿಕೆಟ್ ಲಭ್ಯವಾಗಿದೆ.
ರಾಜ್ಯ ಬಿಜೆಪಿ ಕಳಿಸಿದ ಪಟ್ಟಿಯನ್ನು ತಿರಸ್ಕರಿಸಿರುವ ಬಿಜೆಪಿ ಹೈಕಮಾಂಡ್ ಹೊಸ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.
ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ಮುರುಗೇಶ್ ನಿರಾಣಿ ಅವರ ಹೆಗಲಿಗೆ ವಹಿಸಿರುವುದರಿಂದ ಅವರು ಭಿನ್ನಮತಕ್ಕೆ ದನಿಗೂಡಿಸುವುದು ಅನುಮಾನ. ಆದರೆ ಕತ್ತಿ ಕುಟುಂಬಕ್ಕೆ ಯಾವುದೇ ಸ್ಥಾನಮಾನ ನೀಡದಿರುವುದು ಮುಂದಿನ ದಿನಗಳಲ್ಲಿ ಯಡಿಯೂರಪ್ಪಗೆ ಕಂಟಕವಾಗಲಿದೆ.
ರಾಜ್ಯ ಬಿಜೆಪಿ ಕಳಿಸಿದ ಪಟ್ಟಿಯನ್ನು ತಿರಸ್ಕರಿಸಿರುವ ಬಿಜೆಪಿ ಹೈಕಮಾಂಡ್ ಹೊಸ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಮೂಲಕ ಅಚ್ಚರಿ ಮೂಡಿಸಿದೆ.
ಈ ಇಬ್ಬರೂ ಕೂಡ ಎಬಿವಿಪಿಯಿಂದ ಪಕ್ಷದ ತೆಕ್ಕೆಗೆ ಬಂದವರೆಂದು ಹೇಳಲಾಗಿದೆ.
ರಾಜ್ಯಸಭೆಗೆ ಹೊಸ ಮುಖಗಳನ್ನು ಪ್ರಕಟಿಸುವ ಮೂಲಕ ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬೆಂಬಲಿಗರಿಗೆ ಶಾಕ್ ಮೂಡಿಸಿದೆ.
ಹೈಕಮಾಂಡ್ ಪ್ರಕಟಿಸಿರುವ ಹೆಸರುಗಳಿಂದ ಬಿಜೆಪಿಯಲ್ಲಿ ಭಿನ್ನಮತ ಭುಗಿಲೇಳುವ ಸಾಧ್ಯತೆ ಹೆಚ್ಚಾಗಿದೆ.
ರಾಜ್ಯಸಭಾ ಅಭ್ಯರ್ಥಿ ಆಕಾಂಕ್ಷಿಗಳಾಗಿದ್ದ ಪ್ರಭಾಕರ ಕೋರೆ, ರಮೇಶ್ ಕತ್ತಿ ಅವರಿಗೆ ತೀವ್ರ ಹಿನ್ನಡೆಯಾಗಿದೆ.
ಶತಾಯಗತಾಯ ತಮ್ಮನಿಗೆ ಟಿಕೆಟ್ ಕೊಡಲೇಬೇಕು ಎಂದು ಪಟ್ಟುಹಿಡಿದು ಕೂತಿದ್ದ ಉಮೇಶ್ ಕತ್ತಿ ಮತ್ತು ಅವರ ಟೀಂ ಅಸಮಾಧಾನ ಹೊರಹಾಕುವ ಸಾಧ್ಯತೆ ಹೆಚ್ಚಾಗಿದೆ.
ಬಸನಗೌಡ ಯತ್ನಾಳ್ ಮತ್ತು ಉಮೇಶ್ ಕತ್ತಿ ಕಳೆದ ನಾಲ್ಕೈದು ದಿನಗಳ ಹಿಂದೆ ಭೋಜನ ಕೂಟದಲ್ಲಿ ಭಾಗವಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಿಡಿಮಿಡಿ ವ್ಯಕ್ತಪಡಿಸಿದ್ದರು. ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭಾ ಟಿಕೆಟ್ ನೀಡಬೇಕೆಂದು ಬಹಿರಂಗವಾಗಿ ಒತ್ತಾಯಿಸಿದ್ದರು.
ಆದರೆ ಈಗ ಅಚ್ಚರಿಯ ಅಭ್ಯರ್ಥಿಗಳ ಹೆಸರು ಪ್ರಕಟವಾಗಿರುವುದರಿಂದ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.