ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಹಂದನಕೆರೆಯಲ್ಲಿ ಭಾನುವಾರ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಹಾಗೂ ಡಿ. ಸಿ. ಸಿ. ಬ್ಯಾಂಕ್ ನ ನಿರ್ದೇಶಕರಾಗಿ ಸತತವಾಗಿ 3ನೇ ಬಾರಿಗೆ ಆಯ್ಕೆಯಾದ ಸಿಂಗದಹಳ್ಳಿ ರಾಜಕುಮಾರ್ ಮತ್ತು ವಾಲ್ಮೀಕಿ ಸಮಾಜದ ಮುಖಂಡರಿಗೆ ಸನ್ಮಾನ ಸಮಾರಂಭ ನಡೆಯಿತು.
ಮಹರ್ಷಿ ನಾಯಕ ಹೋರಾಟ ಜಾಗೃತಿ ಸಮಿತಿ ಕಾರ್ಯಕ್ರಮ ಆಯೋಜಿಸಿತ್ತು.
ವಾಲ್ಮೀಕಿ ಸಮಾಜವು ಐತಿಹಾಸಿಕ ಚರಿತ್ರೆಯುಳ್ಳ ಸಮಾಜವಾಗಿದ್ದು, ಈ ನಾಡಿಗೆ ತನ್ನದೇ ಆದ ಕೊಡುಗೆಯನ್ನು ನೀಡಿದೆ. ಇಂತಹ ಸಮಾಜವು ಇಂದು ತನ್ನ ಸಂವಿಧಾನ ಬದ್ದ ಹಕ್ಕುಗಳನ್ನು ಪಡೆಯುವ ಸಲುವಾಗಿ ಸಂಘಟಿತವಾಗುವ ಅನಿವಾರ್ಯತೆ ಎದುರಾಗಿದೆ. ಹಲವಾರು ಕಾರ್ಯಕ್ರಮಗಳನ್ನು ಮಾಡುವ ನೆಪದಲ್ಲಿ ಸಮಾಜವನ್ನು ಒಗ್ಗೂಡಿಸುವ ಕೆಲಸ ಎಲ್ಲರಿಂದಲೂ ಆಗಬೇಕಿದೆ ಎಂದು ಮಹರ್ಷಿ ವಾಲ್ಮೀಕಿ ಸಮುದಾಯದ ಮುಖಂಡರು ತಿಳಿಸಿದರು.
ಕಾರ್ಯಕ್ರಮದ ಮುಖ್ಯ ಕೇಂದ್ರ ಬಿಂದು ಆಗಿರುವ ಸಿಂಗದಹಳ್ಳಿ ರಾಜಕುಮಾರ್ ಅವರಿಗೆ ಸನ್ಮಾನ ಮಾಡಲಾಯಿತು.
ವಾಲ್ಮೀಕಿ ಸಮಾಜದ ಅಧ್ಯಕ್ಷರಾದ ಬಸವರಾಜು ತುಬನಕುಂಟೆ, ಹೋಬಳಿ ಅಧ್ಯಕ್ಷರಾದ ಮೋಹನ್ ಕುಮಾರ್,ರವಿಕುಮಾರ್, ಮಂಜುನಾಥ್, ದುರ್ಗರಾಜು ಹುಳಿಯಾರ್, ಚನ್ನಿಗಪ್ಪ ಮತ್ತು ವಾಲ್ಮೀಕಿ ಸಮಾಜದ ಮುಖಂಡರು ಹಾಗೂ ಕಾರ್ಯಕ್ರಮದ ಉಸ್ತುವಾರಿ ರಮೇಶ್ ಇದ್ದರು.