ತುಮಕೂರು; ತುಮಕೂರು ನಗರದ JDS ಕಾನೂನು ಘಟಕದ ಕಾರ್ಯಾಧ್ಯಕ್ಷರಾಗಿ ವಕೀಲರಾದ ಎಂ.ಬಿ.ನವೀನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ವಕೀಲರಾದ ನವೀನ್ ಕುಮಾರ್ ಅವರು ತುಮಕೂರಿನ ನೆಲಮನೆ ವಂಶಸ್ಥದವರು. ವಿದ್ಯೋದಯ ಕಾನೂನು ಕಾಲೇಜಿನ ವಿದ್ಯಾರ್ಥಿಯಾಗಿದ್ದಾಗ ವಿದ್ಯಾರ್ಥಿ ಸಂಘಟನೆಯಲ್ಲಿ ತೊಡಗಿಕೊಂಡಿದ್ದರು.
ಚತುರ ವಾಗ್ಮಿ ಹಾಗೂ ಸಂಘಟಕರಾದ ಅವರ ನೇಮಕ ಜೆಡಿಎಸ್ ನಲ್ಲಿ ಯುವಕರ ನಡುವೆ ಹೊಸ ಹುರುಪು ಮೂಡಿಸಿದೆ.
ರಾಜಕೀಯ ಲೆಕ್ಕಾಚಾರಗಳ ಹಿನ್ನೆಲೆಯಲ್ಲಿ ಅವರ ನೇಮಕ ನಡೆದಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಜೆಡಿಎಸ್ ನಗರದಲ್ಲಿ ಗಟ್ಟಿಯಾಗಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ದೇವೇಗೌಡರ ಅಭಿಮಾನಿಗಳ ಪಡೆಯೇ ಇದೆ. ಇದು ಜೆಡಿಎಸ್ ಗೆಲುವಿಗೆ ಕಾರಣವಾಗಲಿದೆ. ನನ್ನ ನೇಮಕಕ್ಕೆ ಕಾರಣರಾದ ಎಚ್.ಡಿ.ಕುಮಾರಸ್ವಾಮಿ, ಕಾನೂನು ಘಟಕದ ರಾಜ್ಯಾಧ್ಯಕ್ಷರಾದ ಎ.ಪಿ.ರಂಗನಾಥ್ ಅವರಿಗೆ ಕೃತಜ್ಞತೆ ಸಲ್ಲಿಸುವೆ ಎಂದರು.