Publicstory
ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗಾಗಿ ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಂದ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.
ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು.
ಅರ್ಜಿದಾರರ ಸಂಶೋಧನೆ/ಸಾಧನೆಗಳು ಮೂಲ ಸ್ವರೂಪದ್ದಾಗಿದ್ದು, ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು. ಅಲ್ಲದೆ ಅವರ ಸಂಶೋಧನೆಗಳು/ ಸಾಧನೆಗಳು ವ್ಯಾಪಕವಾಗಿ ಅಳವಡಿಸಲ್ಪಟ್ಟಿದ್ದು, ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು.
ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಬಯಸುವ ರೈತರು ತಮ್ಮ ನಾಮ ನಿರ್ದೇಶನಗಳನ್ನು ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಜುಲೈ 20ರೊಳಗೆ ಆಯಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಲು ಕೋರಿದೆ. ಪ್ರಶಸ್ತಿಗೆ ಆಯ್ಕೆ ಮಾಡುವಲ್ಲಿ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಆಯ್ಕೆ ಸಮಿತಿಯ ನಿರ್ಣಯವೆ ಅಂತಿಮ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನಾಗಲಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನಾಗಲಿ ಸಂಪರ್ಕಿಸಲು ಕೃಷಿ ಇಲಾಖೆ ಕೋರಿದೆ.