ತುಮಕೂರು:ಮಾಜಿ ಉಪಮುಖ್ಯಮಂತ್ರಿ ಹಾಗೂ ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಜಿಲ್ಲೆಯ ಜನರು ಹಕ್ಕೋತ್ತಾಯ ಮಂಡಿಸಿದ್ದಾರೆ.
ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯ, ಛಲವಾದಿ ಮಹಾಸಭಾ,ಡಾ.ಜಿ.ಪರಮೇಶ್ವರ್ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಮುಖಂಡರುಗಳು ನಗರದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಒತ್ತಾಯಿಸಿದರು.
ನಗರದಬಿ.ಜಿ.ಎಸ್.ವೃತ್ತ(ಟೌನ್‍ಹಾಲ್)ದಲ್ಲಿ ಸಮಾವೇಶಗೊಂಡಿದ್ದ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯ, ಛಲವಾದಿ ಮಹಾಸಭಾ(ರಿ) ಹಾಗೂ ಡಾ.ಜಿ.ಪರಮೇಶ್ವರ್ ಅಭಿಮಾನಿಗಳು, ನಗರಪಾಲಿಕೆಯ ಮೇಯರ್, ಸದಸ್ಯರುಗಳು, ವಿದ್ಯಾವಂತ, ದಕ್ಷ, ಪ್ರಾಮಾಣಿಕ ಮತ್ತು ಸಜ್ಜನ ರಾಜಕಾರಣಿ ಡಾ.ಜಿ.ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿಯಾಗುವ ಎಲ್ಲಾ ಆರ್ಹತೆಗಳಿದ್ದು,ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಈ ಬಾರಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ,ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ನ್ಯಾಯವಿದೆ ಎಂಬುದನ್ನು ಸಾಭೀತು ಪಡಿಸುವಂತೆ ಆಗ್ರಹಿಸಿದರು.
ಪಾಲಿಕೆಯ ವಿರೋಧಪಕ್ಷದ ಮಾಜಿ ನಾಯಕ ಜೆ.ಕುಮಾರ್,ಇಂದು ಕಾಂಗ್ರೆಸ್ ಪಕ್ಷ ಅತ್ಯಂತ ಬಹುಮತಗಳಿಸಿ,ಅಧಿಕಾರದ ಚುಕ್ಕಾಣಿ ಹಿಡಿಯುವ ಹಂತಕ್ಕೆ ಬಂದಿದೆ ಎಂದರೆ,ಅದರ ಹಿಂದೆ ಡಾ.ಜಿ.ಪರಮೇಶ್ವರ್ ಅವರ ಶ್ರಮವಿದೆ.ಮಧುಗಿರಿ ಮತ್ತು ಕೊರಟಗೆರೆ ಮೀಸಲು ಕ್ಷೇತ್ರಗಳಲ್ಲಿ ತಲಾ ಮೂರು ಬಾರಿ ಸೇರಿದಂತೆ 6ನೇ ಬಾರಿಗೆ ವಿಧಾನಸಭೆ ಪ್ರವೇಶಿಸಿರುವ ಡಾ.ಜಿ.ಪರಮೇಶ್ವರ್ ರೇಷ್ಮೆ ಸಚಿವರಾಗಿ,ಉನ್ನತ ಶಿಕ್ಷಣ,ವೈದ್ಯಕೀಯ ಶಿಕ್ಷಣ ಸಚಿವರಾಗಿ,ಗೃಹ ಸಚಿವರಾಗಿ,ಉಪಮುಖ್ಯಮಂತ್ರಿಯಾಗಿ ಸಣ್ಣ ಲೋಪದೋಷವೂ ಇಲ್ಲದೆ ಕಾರ್ಯನಿರ್ವಹಿಸಿದ್ದಾರೆ.ಅಲ್ಲದೆ ಈ ಬಾರಿಯ ಚುನಾವಣೆಯಲ್ಲಿ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿ ಅತ್ಯಂತ ಉತ್ಕøಷ್ಟ ಪ್ರಣಾಳಿಕೆ ನೀಡಿ,ಅದು ರಾಜ್ಯದ ಮತದಾರರ ಮನೆ ಮತ್ತು ಮನಗಳನ್ನು ತಲುಪುವಂತೆ ಮಾಡಿದ್ದಾರೆ.ಹಾಗಾಗಿ ಈ ಬಾರಿ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಯಾಗಿ ನೇಮಿಸುವ ಮೂಲಕ ಪಕ್ಷಕ್ಕಾಗಿ ದುಡಿದಿದ್ದಾರೆ. ಪರಮೇಶ್ವರ್ ಅವರಿಗೇನೆ ಸಿಎಂ ಸ್ಥಾನ ನೀಡಬೇಕು ಎಂದರು.
ಪ್ರತಿಭಟನೆಯಲ್ಲಿ ತುಮಕೂರು ಮಹಾನಗರಪಾಲಿಕೆ ಮೇಯರ್ ಪ್ರಭಾವತಿ ಸುಧೀಶ್ವರ್,ಪಾಲಿಕೆ ಸದಸ್ಯರಾದ ನಯಾಜ್ ಅಹಮದ್,ಛಲವಾದಿ ಮಹಾಸಭಾದ ರಾಜ್ಯ ನಿರ್ದೇಶಕ ನಾಗೇಶ್,ದಲಿತ ಛಲವಾದಿ ಮಹಾಸಭಾ ಅಧ್ಯಕ್ಷ ಡಾ.ಚಂದ್ರಪ್ಪ,ದೊಡ್ಡಸಿದ್ದಯ್ಯ,ಪಿ.ಶಿವಪ್ರಸಾದ್,ಇರಕಸಂದ್ರ ಜಗನ್ನಾಥ್,ನರಸಿಂಹಮೂರ್ತಿ,ಕೊರಟಗೆರೆ ಕುಮಾರ್, ಎನ್.ಕೆ.ನಿಧಿ ಕುಮಾರ್,ಸಿದ್ದಲಿಂಗಯ್ಯ,ರಘು,ಮಾದಿಗ ದಂಡೋರ ಜಿಲ್ಲಾಧ್ಯಕ್ಷ ರಾಜೇಶ್, ನಿವೃತ್ತ ಅಧಿಕಾರಿ ಶಿವಣ್ಣ, ಕೆಪಿಸಿಸಿ ವೀಕ್ಷಕರಾದ ವಿಜಯಲಕ್ಷ್ಮಿ, ನಾಗಮ್ಮ,ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವಸೈನ್ಯದ ವಸುಂಧರ,ಶ್ರೀಧರ್, ಓಂಕಾರ್ ಕೊಪ್ಪಕಲ್ಲು, ಮಂಜೇಶ್, ಸೈದಪ್ಪ ಡಾಂಗೆ ಮತ್ತಿತರರು ಭಾಗವಹಿಸಿದ್ದರು.