ನಾಗವಲ್ಲಿ: ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಸುರೇಶಗೌಡರನ್ನು ಗೆಲ್ಲಿಸಿದರೆ ರೈತರು ತಮ್ಮಉತ್ಪನ್ನಗಳನ್ನು ಕೆಡದಂತೆ ಇಡಲು ಕೋಲ್ಡ್ ಸ್ಟೋರೇಜ್, ಹೆಣ್ಣು ಮಕ್ಕಳಿಗಾಗಿ ಮಹಿಳಾ ಕಾಲೇಜು ಸ್ಥಾಪಿಸುವ ಭರವಸೆಯನ್ನು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ನೀಡಿದರು.
ಶಕ್ತಿಸೌಧದಲ್ಲಿ ನಡೆದ ಬೃಹತ್ ಮಹಿಳಾ ಸಮಾವೇಷದಲ್ಲಿ ಮಾತನಾಡಿದ ಅವರು ಮಹಿಳೆಯರಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಯೋಜನೆಗಳು, ಕಾರ್ಯಕ್ರಮಗಳ ಪಟ್ಟಿಯನ್ನು ಮುಂದಿಟ್ಟರು. ಪಾಪ, ಈ ಯೋಜನೆಗಳ ಬಗ್ಗೆ ಇಲ್ಲಿನ ಶಾಸಕರಿಗೆ ಗೊತ್ತಿಲ್ಲದೆಯೋ, ಇಲ್ಲವೋ ಎಂದು ಗೇಲಿ ಮಾಡಿದರು.
ಡಬಲ್ ಎಂಜಿನ್ ಸರಕಾರ ಮಹಿಳಾ ಸಬಲೀಕರಣ ಮತ್ತು ಮಹಿಳೆಯರ ಶಿಕ್ಷಣಕ್ಕೆ ಒತ್ತು ನೀಡಿ,ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಹೆಣ್ಣುಮಕ್ಕಳು ಕಡಿಮೆ ಆಗುತ್ತಿದ್ದಾರೆ ಎನ್ನುವುದನ್ನು ಗಮನಿಸಿ 2008 ರಲ್ಲಿ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಭಾಗ್ಯಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದರು.ಹೆಣ್ಣುಮಕ್ಕಳ ಬಗ್ಗೆ ಚಿಂತಿಸುವ ಸರಕಾರ ಎಂದರೆ ಅದು ಬಿಜೆಪಿ ಮಾತ್ರ, ಮೋದಿ ಸರಕಾರ ಉದ್ಯೋಗಸ್ಥ ಮಹಿಳೆಯರಿಗೆ 26 ವಾರಗಳ ಹೆರಿಗೆ ರಜೆ ಮಾಡಿದ್ದಾರೆ, ಆರೋಗ್ಯಕ್ಕಾಗಿ ಆಯುಷ್ಮಾನ್ ಕಾರ್ಡ್ ಅನ್ನು ಜಾರಿಗೆ ತಂದಿದೆ.ಇಲ್ಲಿರುವ ಶಾಸಕರಿಗೆ ಜನರ ಆರೋಗ್ಯದ ಕಾಳಜಿ ಇದೆಯೋ ಇಲ್ಲವೋ ಗೊತ್ತಿಲ್ಲ, ಸುರೇಶ್ ಗೌಡರು ಶಾಸಕರಾಗಿದ್ದರೆ ಮನೆ ಮನೆಗೆ ಯೋಜನೆ ತಲುಪಿಸುತ್ತಿದ್ದರು ಎಂದರು.
,ದೇಶದ ಎಲ್ಲ ಮನೆಗಳಿಗೆ ನಲ್ಲಿ ನೀರು ಕೊಡಲು ಮೋದಿ ಅವರು ಗ್ರಾಮಾಂತರ ಕ್ಷೇತ್ರಕ್ಕೆ 140 ಕೋಟಿ ಅನುದಾನ ನೀಡಿದ್ದಾರೆ.ಕಳೆದ ಐದು ವರ್ಷಗಳಲ್ಲಿ ಅಭಿವೃದ್ದಿ ಎಂಬುದು ಶೂನ್ಯ.ಶಾಸಕರು ಇದ್ದಾರೋ ಇಲ್ಲವೋ ಎಂಬುದೇ ಜನರಿಗೆ ತಿಳಿಯದಾಗಿದೆ.ಕ್ಷೇತ್ರ ಮತ್ತೊಮ್ಮೆ ಅಭಿವೃದ್ದಿ ಕಾಣಬೇಕಾದರೆ ಸುರೇಶ್‌ಗೌಡ ಶಾಸಕರಾಗುವಂತೆ ನೀವೆಲ್ಲರೂ ಆಶೀರ್ವಾದ ಮಾಡಬೇಕೆಂದು ಶೋಭಾ ಕರಂದ್ಲಾಜೆ ಮನವಿ ಮಾಡಿದರು.
ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾಗಿ ಬಿ.ಸುರೇಶಗೌಡ ಮಾಡಿರುವ ಅಭಿವೃದ್ದಿ ಕಾರ್ಯಗಳು ಇಡೀ 224 ಕ್ಷೇತ್ರಗಳಿಗೂ ಮಾದರಿಯಾಗಿವೆ.ಎಲ್ಲಾ ಗ್ರಾಮಗಳಿಗೂ ರಸ್ತೆ,ಸಿಸಿ.ಚರಂಡಿಗಳನ್ನು ಮಾಡಿ,ಕ್ಷೇತ್ರವನ್ನು ಮಾದರಿಯಾಗಿದ್ದಾರೆ. ವಿದ್ಯುತ್ ಇಲಾಖೆಯಿಂದ 500 ಕೋಟಿ ರೂ ತಂದು,ರೈತರ ಎಲ್ಲಾ ಐಪಿ ಸೆಟ್‌ಗಳಿಗೆ ತಲಾ 25 ಕೆ.ವಿ.ಟಿ.ಸಿಗಳನ್ನು ಆಳವಡಿಸಿದ ಏಕೈಕ ಕ್ಷೇತ್ರ ತುಮಕೂರು ಗ್ರಾಮಾಂತರ.ಇದರ ರೂವಾರಿ ಸುರೇಶಗೌಡ ಎಂಬುದನ್ನು ನಾವ್ಯಾರು ಮರೆಯುವಂತಿಲ್ಲ ಎಂದರು.
ಈ ಕ್ಷೇತ್ರದ ಮಾಜಿ ಶಾಸಕರಾದ ಸುರೇಶಗೌಡರು ಕೇಂದ್ರದ ಕೃಷಿ ಇಲಾಖೆಯ ಮುಂದೆ ಕೆಲವು ಬೇಡಿಕೆಗಳನ್ನು ಇಟ್ಟಿದ್ದಾರೆ.ಕೃಷಿ ಮೂಲಭೂತ ಸೌಕರ್ಯ ನಿಧಿಯ ಅಡಿಯಲ್ಲಿ ಕ್ಷೇತ್ರದಲ್ಲಿ ರೈತರು ಬೆಳೆಯುವ ಕೃಷಿ ಉತ್ಪನ್ನಗಳ ಸಂರಕ್ಷಣೆಗೆ ಶೀಥಲೀಕರಣ ಘಟಕದ ಜೊತೆಗೆ, ಕೃಷಿ ಉತ್ಪನ್ನಗಳಿಗೆ ಒಳ್ಳೆಯ ಬೆಲೆ ಸಿಗುವಂತಹ ಯೋಜನೆ ರೂಪಿಸಲು ಮನವಿ ಮಾಡಿದ್ದಾರೆ. ಸದಾ ಜನಪರ ಕಾಳಜಿ ಇರುವ ಸುರೇಶ್‌ಗೌಡ ಹಾಗೂ ದೇಶದ ಅಭಿವೃದ್ದಿಗಾಗಿ ದುಡಿಯುತ್ತಿರುವ ಬಿಜೆಪಿ ಪಕ್ಷವನ್ನು ನಾವೆಲ್ಲರೂ ಬೆಂಬಲಿಸಬೇಕಾಗಿದೆ ಎಂದು ಶೋಭಾ ಕರಂದ್ಲಾಜೆ ನುಡಿದರು.
ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಮಾತನಾಡಿ, ಹೊನ್ನಾವರ-ಬೆಂಗಳೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವೆ ಶೋಭಾ ಕರಂದ್ಲಾಜೆ ಕಾರಣ, ಈ ಯೋಜನೆಗೆ ಬಿಎಸ್ ವೈ ಅವರು ಬೆಂಬಲ ನೀಡಿದ್ದರಿಂದ ಇಂದು ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ ಎಂದರು.
ದೇಶಕ್ಕೆ ಇಂದು ಮೋದಿ ಹಾಗೂ ಬಿಜೆಪಿ ಅನಿವಾರ್ಯವಾಗಿದೆ, ತನ್ನನ್ನು ತಾನೇ ನೋಡಿಕೊಳ್ಳದ ರಾಹುಲ್‌ಗಾಂಧಿಗೆ ದೇಶವನ್ನು ನೋಡಿಕೊಳ್ಳುವ ಯೋಗ್ಯತೆ ಇಲ್ಲ.ಹೊರದೇಶಕ್ಕೆ ಹೋಗಿ ದೇಶದ ಪ್ರಜಾಪ್ರಭುತ್ವ ಟೀಕಿಸುವ ವ್ಯಕ್ತಿಯಿಂದ ದೇಶವನ್ನು ಸುಭದ್ರಗೊಳಿಸಲು ಸಾಧ್ಯವಿಲ್ಲ ಎಂದರು.
ರಾಜ್ಯ ಮತ್ತು ರಾಷ್ಟ್ರದಲ್ಲಿ ಸುಭದ್ರ ಸರಕಾರ ತರಲು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಬೇಕು.ಸುರೇಶ್ ಗೌಡರು ಉತ್ತಮ ಕೆಲಸಗಾರರು.ದೆವ್ವದಂತೆ ಕೆಲಸ ಮಾಡುವ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ.ಮತ್ತೊಮ್ಮೆ ಗ್ರಾಮಾಂತರದಲ್ಲಿ ಕ್ರಿಯಾಶೀಲ ರಾಗಿರುವ ಸುರೇಶ್ ಗೌಡರು ಗೆಲ್ಲಿಸಬೇಕೆಂದು ಎಂದು ಮನವಿ ಮಾಡಿದರು.
ಶಾಸಕ ಜಿ.ಬಿ.ಜೋತಿಗಣೇಶ್ ಮಾತನಾಡಿ,ಕ್ಷೇತ್ರಗಳ ಅಭಿವೃದ್ದಿಯಲ್ಲಿ ನಮ್ಮೆಲ್ಲರಿಗೂ ಮಾದರಿ ಯಾಗಿದ್ದಾರೆ. ಮಂತ್ರಿಗಳು,ಅಧಿಕಾರಗಳ ಜೊತೆಗೆ ಜಗಳವಾಡಿ, ಕ್ಷೇತ್ರದ ಅಭಿವೃದ್ದಿಗೆ ಹಣ ತಂದಿದ್ದಾರೆ. ಅವರನ್ನುಮತ್ತೊಮ್ಮೆ ಕ್ಷೇತ್ರದ ಜನತೆ ಶಾಸಕರಾಗಿ ಮಾಡಿ, ಕ್ಷೇತ್ರವನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಸಹಕಾರಿಯಾಗಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಬಿ.ಸುರೇಶ್‌ಗೌಡ ಮಾತನಾಡಿ,ನನ್ನ 10 ವರ್ಷದ ಅವಧಿಯಲ್ಲಿ ಕ್ಷೇತ್ರದ ಜನರಿಗೆ ಕುಡಿಯುವ ನೀರು,ರಸ್ತೆ, ಚರಂಡಿ,ಬೀದಿ ದೀಪ ಹಾಗೂ ಆರೋಗ್ಯ ಸೇವೆಗಳಿಗಾಗಿ ಆಸ್ಪತ್ರೆ ಮತ್ತು ಶಾಲೆ ದೇವಸ್ಥಾನ ಗಳನ್ನು ನಿರ್ಮಿಸಿ ಕೊಡಲಾಗಿದೆ.ಮಹಿಳಾ ಶಕ್ತಿ ಒಂದಾಗಿ ಈ ಬಾರಿಯ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದರೆ, ಇಡೀ ವಿಶ್ವವೇ ತುಮಕೂರು ಗ್ರಾಮಾಂತರ ಕ್ಷೇತ್ರದತ್ತ ತಿರುಗಿ ನೋಡುವಂತೆ ಅಭಿವೃದ್ದಿ ಕಾರ್ಯಗಳನ್ನು ಮಾಡಿ ತೋರಿಸುತ್ತೇನೆ ಎಂದರು.
ಕಾಂಗ್ರೆಸ್ ಸರಕಾರವಿದ್ದಾಗಲೂ ಸುಮಾರು 500 ಕೋಟಿ ರೂಗಳ ಅನುದಾನ ತಂದು ಕ್ಷೇತ್ರದ ಅಭಿವೃದ್ದಿಗೆ ಬಳಕೆ ಮಾಡಿದ್ದೇನೆ.ಆದರೆ ನನ್ನ ಕಾಲದಲ್ಲಿ ಅಭಿವೃದ್ದಿಗೊಂಡ ಶಾಲೆಗಳ ಶೌಚಾಲಯಗಳಿಗೆ ನೀರಿಲ್ಲ, ಬಳಕೆಗೆ ಯೋಗ್ಯವಿಲ್ಲ ದಂತಾಗಿವೆ.ಕಂಪ್ಯೂಟರ್ ಲ್ಯಾಬ್ ಉಪಯೋಗಕ್ಕೆ ಬರುತ್ತಿಲ.ನಾಗವಲ್ಲಿಯಲ್ಲಿ ಹೆಣ್ಣು ಮಕ್ಕಳಿಗಾಗಿ ಪ್ರಥಮದರ್ಜೆ ಕಾಲೇಜು ತೆರೆದು, ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸುವ ಗುರಿ ಹೊಂದಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಅಂಬಿಕಾ ಹುಲಿನಾಯ್ಕರ್,ತಾಲೂಕು ಅಧ್ಯಕ್ಷ ರೇಣುಕಮ್ಮ,ಮಹಿಳಾ ಮುಖಂಡರಾದ ತಾರಾಮಣಿ,ಜಿ.ಪಂ.ಮಾಜಿ ಅಧ್ಯಕ್ಷೆ ಶಾರದ ನರಸಿಂಹಮೂರ್ತಿ,ಸುಮಿತ್ರಾದೇವಿ,ಎಲ್ಲಾ ತಾಲೂಕುಗಳ ಮಹಿಳಾ ಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು, ಜಿ.ಪಂ, ತಾ.ಪಂ. ಹಾಗೂ ಗ್ರಾ.ಪಂಗಳ ಸದಸ್ಯರುಗಳು ಉಪಸ್ಥಿತರಿದ್ದರು.
್