ಗುಬ್ಬಿ : ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿಕೊಟ್ಟಾಗಮಾತ್ರ ಸಮಾಜದಲ್ಲಿ ಉತ್ತಮ ಸ್ಥಾನಮಾನ ಪಡೆಯಲು ಸಾಧ್ಯ ಎಂದು ಕುಂಚಿಟಿಗರ ಮಹಾಸಂಸ್ಥಾನ ಮಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುಬ್ಬಿ, ಶ್ರೀ ಮಾತೃ ಪೂಜಾ ಸಮಿತಿ ಸಿಎಸ್ ಪುರ ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಆಶಯದಲ್ಲಿ ಮಾತೃ ಪೂಜಾ ಕಾರ್ಯಕ್ರಮ ಹಾಗೂ ಧಾರ್ಮಿಕ ಸಭೆ ಕಾರ್ಯಕ್ರಮದಲ್ಲಿ ಮಾತನಾಡಿ, ಹೆಣ್ಣು ಮಕ್ಕಳು ಬೆಳಗ್ಗೆ ಏಳುವುದರಿಂದ ಪ್ರಾರಂಭಗೊಂಡು ರಾತ್ರಿ ಮಲಗುವವರೆಗೂ ಕ್ರಿಯಾಶೀಲತೆಯಿಂದ ಕೂಡಿರುತ್ತಾರೆ. ಆದ್ದರಿಂದ ಹೆಣ್ಣು ಮಕ್ಕಳನ್ನು ಗೌರವಿಸುವುದು, ಪ್ರತಿಯೊಬ್ಬರ ಜವಾಬ್ದಾರಿ ಎಂದರು.
ಹಿರಿಯ ಜಲ್ಲಾ ನಿರ್ದೇಶಕಿ ದಯಾಶೀಲ ಮಾತನಾಡಿ, ಶ್ರೀ ಕ್ಷೇತ್ರದ ಕಾರ್ಯಕ್ರಮ ಗುರುಹಿರಿಯರ ಸಹಕಾರದಿಂದ ಕ್ಷೇತ್ರ ವಿಸ್ತರಣೆಯಾಗುತ್ತದೆ. ಕುಡಿತಕ್ಕೆ ಒಳಪಟ್ಟ ವ್ಯಕ್ತಿಗಳಿಗೆ ಮದ್ಯವರ್ಜನ ಶಿಬಿರಗಳನ್ನು ಮಾಡಿ, ಅವರು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಲು ಶ್ರೀ ಕ್ಷೇತ್ರ ಶ್ರಮಿಸುತ್ತಿದೆ. ಹತ್ತು ಹಲವು ಸಾಮಾಜಿಕ ಸೇವೆಯನ್ನು ಸಲ್ಲಿಸುತ್ತಿದೆ ಎಂದರು.
ಮಧ್ಯವರ್ಜನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅ ನಾ ಲಿಂಗಪ್ಪ ಮಾತನಾಡಿ, ನಮ್ಮ ಸಂಸ್ಕೃತಿಯ ನೆಲಗಟ್ಟು ಉಳಿಸಬೇಕಾದರೆ ಮಾತೃ ಪೂಜಾ ಕಾರ್ಯಕ್ರಮಗಳ ನಡೆಯಬೇಕು. ಶ್ರೀ ಕ್ಷೇತ್ರ ಹತ್ತು ಹಲವು ಸಂಸ್ಕಾರ ಕಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಮೊದಲು ನಾವುಗಳ ಸಂಸ್ಕಾರ ಕಲಿತು ತಮ್ಮ ಮಕ್ಕಳಿಗೂ ಸಂಸ್ಕಾರ, ಸಂಸ್ಕತಿ ಕಲಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಹಳ್ಳಿಕಾರ್ ಮಠದ ಪೀಠಾಧಿಪತಿ ಬಾಲಕೃಷ್ಣಾನಂದ ಸ್ವಾಮೀಜಿ ಮಾತನಾಡಿ, ಮಕ್ಕಳು ದುಷ್ಟಕ್ಕೆ ಬಲಿಯಾಗದಂತೆ ಗುರುಹಿರಿಯರು ಗಮನಿಸುವುದು ಅತ್ಯಗತ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ರಾಜೇಶ್, ಗ್ರಾಮ ಪಂಚಾಯತಿ ಅಧ್ಯಕ್ಷರಾ ಸುಮಿತ್ರಾಶಿವಯ್ಯ ,ಗುರುರುದ್ರಮುನಿ ದೇವಾಂಗ ಸಂಘದ ಅಧ್ಯಕ್ಷ ಕೆ.ಎಸ್.ಲಿಂಗಣ್ಣ, ಸಿಬ್ಬಂದಿಗಳಾದ ಮೇಲ್ವಿಚಾರಕಿ ರೇಣುಕಾ, ಚಂದ್ರಶೇಖರ್ ಗುರುಪ್ರಕಾಶ್, ಶಿವ ನಾಗಪ್ಪ, ವೀಣಾ, ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಸಂಘದ ಸದಸ್ಯರುಗಳು, ಸಾರ್ವಜನಿಕರು ಹಾಗೂ ಇದ್ದರು ಇತರರು ಇದ್ದರು.