Tumkuru: ಜಲಜೀವನ್ ಮಿಷನ್ ಯೋಜನೆಯಡಿ 8 ಹಂತಗಳಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ ಮಾತನಾಡಿದ ಗೃಹ ಸಚಿವ dr. G. Parmeshwer ಈ ಯೋಜನೆಯಡಿ ಕೈಗೊಂಡ ಕಾಮಗಾರಿಗಳನ್ನು ಖುದ್ದು ಭೇಟಿ ಪರಿಶೀಲಿಸಿದ್ದೇನೆ. ಹಲವಾರು ಗ್ರಾಮಗಳಲ್ಲಿ ನಳ ಸಂಪರ್ಕಕ್ಕಾಗಿ ಜಿ.ಐ. ಪೈಪ್ ಬದಲಿಗೆ ಪ್ಲಾಸ್ಟಿಕ್ ಪೈಪ್ ಅಳವಡಿಸಲಾಗಿದೆ. ಅಳವಡಿಸಿದ ನಲ್ಲಿ ಬಳಿ ನೀರು ನಿಲ್ಲದಂತೆ ಚರಂಡಿ ಕಡೆ ಹರಿಯುವಂತೆ ಮಾಡಬೇಕು. ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಇಂಜಿನಿಯರ್‍ಗಳು ಗುಣಮಟ್ಟದ ಕಾಮಗಾರಿ ನಿರ್ಮಿಸಬೇಕು. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಜೆಜೆಎಂ ಕಾಮಗಾರಿ ಶೇಕಡಾ 100ರಷ್ಟು ಪ್ರಗತಿ ಕಂಡಿದ್ದು, ತುಮಕೂರಿನಲ್ಲಿ ಯೋಜನೆಗೆ ವೇಗ ನೀಡಿ ಶೇ. 100ರಷ್ಟು ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.
ಮಾಡುವ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ನೀಡಬೇಕು. ಸ್ವಚ್ಛತೆಗೆ ಆದ್ಯತೆ ನೀಡದ ಪಿಡಿಓಗಳ ಅಮಾನಿತ್ತಿಗೆ ಸ್ವತಃ ನಾನೇ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದ ಅವರು, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಕೆ.ವಿ., ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಜಿಲ್ಲಾ ಪಂಚಾಯತಿಯ ನರಸಿಂಹಮೂರ್ತಿ, ಸಣ್ಣಮಸಿಯಪ್ಪ, ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ರವೀಶ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು