ರಾಜ್ಯದ ಎಲ್ಲಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹಾಸನ ಟಿಕೆಟ್ ಅನ್ನು ಶುಕ್ರವಾರ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಕಟಿಸಿದರು.
ಈ ವೇಳ ಎಚ್.ಡಿ.ರೇವಣ್ಣ, ಪಕ್ಷದ ಅಧ್ಯಕ್ಷ ಇಬ್ರಾಹಿಂ ಇದ್ದರು. ಇದಕ್ಕೂ ಮುನ್ನ ಕುಮಾರಸ್ವಾಮಿ ಅವರು ರೇವಣ್ಣ ಅವರೊಂದಿಗೆ ಸಭೆ ನಡೆಸಿದರು.
ಹಾಸನ ಟಿಕೆಟ್ ಗೆ ತೀವ್ರ ಪೈಪೋಟಿ ನಡೆಸಿದ್ದ ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡಿಲ್ಲ. ಬದಲಿಗೆ ಎಚ್.ಪಿ. ಸ್ವರೂಪ್ ಅವರಿಗೆ ನೀಡಲಾಗಿದೆ.
ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡುವುದಾಗಿ ಕುಮಾರಸ್ವಾಮಿ ಮೊದಲಿನಿಂದಲೂ ಹೇಳುತ್ತಾ ಬಂದಿದ್ದರು.
ಹಾಸನದ ಅಭ್ಯರ್ಥಿಗಳ ಪಟ್ಟಿಯನ್ನು ರೇವಣ್ಣ ಪ್ರಕಟಿಸಿದರು. ರಾಜ್ಯದ ಉಳಿದ ಎರಡನೇ ಪಟ್ಟಿಯನ್ನು ಕುಮಾರಸ್ವಾಮಿ ಪ್ರಕಟಿಸಿದರು.