Thursday, September 12, 2024
Google search engine
HomeUncategorizedಧರ್ಮಯುದ್ಧ: ಶ್ರೀಕೃಷ್ಣನ ವಂಶಸ್ಥರ ನೆರವು ಯಾಚಿಸಿದ ಸುರೇಶಗೌಡ

ಧರ್ಮಯುದ್ಧ: ಶ್ರೀಕೃಷ್ಣನ ವಂಶಸ್ಥರ ನೆರವು ಯಾಚಿಸಿದ ಸುರೇಶಗೌಡ

ತುಮಕೂರು: ಕಳೆದ ಚುನಾವಣೆಯಲ್ಲಿ ಮೋಸ, ಕುತಂತ್ರದಿಂದ ಸೋಲಿಸಿದ ನನಗೆ ಈ ಸಲದ ಚುನಾವಣೆಯ ಧರ್ಮಯುದ್ಧದಲ್ಲಿ ಶ್ರೀಕೃಷ್ಣ ಪರಮಾತ್ಮನ ಮಕ್ಕಳಾದ  ಗೊಲ್ಲರು ನನ್ನ ಪರವಾಗಿ ನಿಲ್ಲಬೇಕು. ಧರ್ಮಯುದ್ಧದಲ್ಲಿ ನನಗೆ ಗೆಲುವು ತಂದುಕೊಡಬೇಕು ಎಂದು ಮಾಜಿ ಶಾಸಕ, ಬಿಜೆಪಿ ಅಭ್ಯರ್ಥಿ ಬಿ.ಸುರೇಶಗೌಡ ಮನವಿ ಮಾಡಿದರು.


ಶಕ್ತಿಸೌಧದಲ್ಲಿ ಆಯೋಜಿಸಿದ್ದ ಕಾಡುಗೊಲ್ಲರ ಸಮಾವೇಶದಲ್ಲಿ ಮಾತನಾಡಿದ ಅವರು, ಶ್ರೀಕೃಷ್ಣನ ಕಾರಣದಿಂದಾಗಿ ಅಧರ್ಮದ ವಿರುದ್ಧ ಪಾಂಡವರು ಜಯಗಳಿಸಿದರು. ಕೃಷ್ಣನ ವಂಶಸ್ಥರಾದ ಕಾಡುಗೊಲ್ಲರು ನನ್ನ ಪರವಾಗಿ ನಿಲ್ಲಬೇಕು. ನಿಮ್ಮ ಶಕ್ತಿ ನನಗೆ ಕೊಡಿ ಎಂದು ಕೇಳಿದರು.

ಕ್ಷೇತ್ರದ 35 ಗ್ರಾಮಪಂಚಾಯಿತಿಗಳಲ್ಲಿ 3ರಲ್ಲಿ ಕಾಡುಗೊಲ್ಲರಿಗೆ, ಒಂದರಲ್ಲಿ ಗೊಲ್ಲ ಸಮುದಾಯಕ್ಕೆ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನ ಕಲ್ಪಿಸುವ ಮೂಲಕ ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯ ಕಾಪಾಡಲಾಗಿದೆ ಎಂದರು.

ಕ್ಷೇತ್ರದ ಹಿರೇಹಳ್ಳಿ, ಗಳಿಗೇನಹಳ್ಳಿ, ಗ್ರಾಮಪಂಚಾಯಿತಿಗಳಲ್ಲಿ ಕಾಡುಗೊಲ್ಲ ಸಮುದಾಯಕ್ಕೆ, ಸೀತಕಲ್ಲು ಗ್ರಾಮ ಪ೦ಚಾಯಿತಿಯಲ್ಲಿ ಗೊಲ್ಲ ಸಮುದಾಯದವರಿಗೆ ಅಧ್ಯಕ್ಷ ಸ್ಥಾನ ನೀಡಿ, ಸಾಮಾಜಿಕ ನ್ಯಾಯ ಕಲ್ಪಿಸಲಾಗಿದೆ ಎಂದರು.

ಶಿರಾ ಉಪಚುನಾವಣೆಯಲ್ಲಿ ಹಾಗೂ ಇನ್ನಿತರ ಸಂದರ್ಭದಲ್ಲಿ ನಾನು ಗೊಲ್ಲ ಸಮುದಾಯಕ್ಕೆ ನೀಡಿದ ಮಾತಿನಂತೆ ನಡೆದುಕೊಂಡಿದ್ದೇನೆ. ಅತ್ಯಂತ ನಿಕೃಷ್ಟ ಸ್ಥಿತಿಯಲ್ಲಿದ್ದನ್ನು ಕಣ್ಣಾರೆ ಕಂಡು, ಇವರ ಸಾಮಾಜಿಕ, ಶೈಕ್ಷಣಿಕ, ಅರ್ಥಿಕ ಅಭಿವೃದ್ಧಿಗಾಗಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂಬ

ಬೇಡಿಕೆಯನ್ನು ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮುಂದಿಟ್ಟು, ನಿಗಮವನ್ನು ಸ್ಥಾಪಿಸಿ, ಚಂಗಾವರ ಮಾರಣ್ಣ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದೇನೆ ಎಂದರು.

ಅಲ್ಲದೆ ಕ್ಷೇತ್ರದ 38 ಗೊಲ್ಲರಹಟ್ಟಿಗಳಿಗೂ ಸಿಸಿ ರಸ್ತೆ, ಚರಂಡಿ, ಕುಡಿಯುವ ನೀರು, ಅಗತ್ಯವಿರುವರಿಗೂ ಗಂಗಾ ಕಲ್ಯಾಣ ಯೋಜನೆಯಲ್ಲಿ ಕೊಳವೆ ಬಾವಿ ನೀಡಿ, ಅವರ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡಿದ್ದೇನೆ. ಹಾಗಾಗಿ ಮೇ 10 ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಮತ ನೀಡಿ ಗೆಲುವು ತಂದುಕೊಡುವಂತೆ ಮನವಿ ಮಾಡಿದರು.

ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಕ್ಷೇತ್ರದ ಗೊಲ್ಲರಹಟ್ಟಿಗಳನ್ನು ದತ್ತು ಪಡೆದು, ಅಲ್ಲಿನ ಶಾಲೆ,ಅಂಗನವಾಡಿ ಸೇರಿದಂತೆ ಗ್ರಾಮವನ್ನು ದತ್ತು ಪಡೆದು, ಅಭಿವೃದ್ಧಿ ಪಡಿಸಲಾಗುವುದು. ಇದರ ಜೊತೆಗೆ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಹೆಚ್ಚಿನ ಅನುದಾನ ತಂದು ಕಾಡುಗೊಲ್ಲ ಮತ್ತು ಗೊಲ್ಲ ಸಮುದಾಯದ ಮಕ್ಕಳ ಶೈಕ್ಷಣಿಕ, ಅರ್ಥಿಕ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಬಿ.ಸುರೇಶಗೌಡ ತಿಳಿಸಿದರು.

ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಚಂಗಾವರ ಮಾರಣ್ಣ ಮಾತನಾಡಿ,ನಾನು ಇಂದು ಒಂದು ನಿಗಮದ ಅಧ್ಯಕ್ಷನಾಗಿದ್ದರೆ ಅದಕ್ಕೆ ಸುರೇಶಗೌಡರೇ ಕಾರಣ. ಶಿರಾ ಉಪಚುನಾವಣೆಯಲ್ಲಿ ನನ್ನೊಂದಿಗೆ ಶಿರಾಕ್ಷೇತ್ರದ 372 ಕಾಡುಗೊಲ್ಲರ ಹಟ್ಟಿಗಳನ್ನು ಸುತ್ತಿ, ಅಲ್ಲಿನ ನಿಜಸ್ಥಿತಿ ಅರಿತ ಅಂದಿನ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರಿಗೆ ಕಾಡುಗೊಲ್ಲ ನಿಗಮದ ಸ್ಥಾಪನೆ ಕುರಿತಂತೆ ಮನವರಿಕೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ ನಿಗಮ ಸ್ಥಾಪನೆಯಾಯಿತು.ಅಲ್ಲದೆ ಕಾಡುಗೊಲ್ಲರ ಅರಾಧ್ಯ ಧೈವಗಳಿರುವ ಜುಂಜಪ್ಪನಗುಡ್ಡೆ, ಹೆತ್ತಪ್ಪನ ದೇವಾಲಯ,ಚಿಕ್ಕಣ್ಣನ ಹಟ್ಟಿಗಳಿಗೆ ಅನುದಾನ ನೀಡಿ ಅಭಿವೃದ್ಧಿಪಡಿಸಿದ್ದಾರೆ. ಹಾಗಾಗಿ ಅವರನ್ನು ನಾವು ಈ ಚುನಾವಣೆಯಲ್ಲಿ ಕೈ ಹಿಡಿಬೇಕಾಗಿದೆ ಎಂದರು

ತುಮಕೂರು ಗ್ರಾಮಾಂತರ ಓಬಿಸಿ ಮೋರ್ಚಾದ ಶಿವಕುಮಾರ್ ಮಾತನಾಡಿ, ಕ್ಷೇತ್ರದಲ್ಲಿ 38 ಗೊಲ್ಲರಹಟ್ಟಿಗಳಿದ್ದು, ಅವುಗಳಿಗೆ ರಸ್ತೆ, ಕುಡಿಯುವ ನೀರು, ಚರಂಡಿಗಳನ್ನು ಕಲ್ಪಿಸಲು ಸುರೇಶಗೌಡರು ಅವಿರತ ಶ್ರಮಿಸಿದ್ದಾರೆ.ಅಲ್ಲದೆ ಗೊಲ್ಲರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಸುರೇಶಗೌಡರು ಶಾಸಕರಾಗಿದ್ದ ಕಾಲದಲ್ಲಿ ಮಾಡಿದ್ದು, ಕಾಡುಗೊಲ್ಲ ಸಮುದಾಯದ ಆಸೆ, ಅಮೀಷಗಳಿಗೆ ಬಲಿಯಾಗದೆ ಸುರೇಶಗೌಡರನ್ನು ಈ ಬಾರಿ ಬೆಂಬಲಿಸುವಂತೆ ಮನವಿ ಮಾಡಿದರು.

ಕಾಡುಗೊಲ್ಲ ಸಮುದಾಯದ ಯುವ ಮುಖಂಡ ಗೋವಿಂದರಾಜು ಮಾತನಾಡಿ,ಕರೋನ ಸಂದರ್ಭದಲ್ಲಿ ಸುರೇಶಗೌಡರು ಸೋಂಕಿಗೆ ಒಳಗಾದವರಿಗೆ ಬೆಡ್ ಒದಗಿಸಲು ಅವಿರತ ಶ್ರಮಿಸಿದ್ದಾರೆ.ಅಲ್ಲದೆ ಕ್ಷೇತ್ರದಾದ್ಯಂತ ದಿನಸಿ ಕಿಟ್ ವಿತರಿಸಿ ಎಲ್ಲರಿಗೂ ಅನುಕೂಲ ಕಲ್ಪಿಸಲಾಗಿದೆ.ಇದರ ಅನುಕೂಲ ಪಡೆದ ಪ್ರತಿಯೊಬ್ಬರು ಸುರೇಶಗೌಡರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?