ತುಮಕೂರು: ಕೋವಿಡ್- 19 ಹರಡುವುದನ್ನು ತಡೆಗಟ್ಟಲು ರಾಜ್ಯದಲ್ಲಿ ಮೇ10ರಿಂದ ಲಾಕ್‌ಡೌನ್ ಜಾರಿಗೊಳಿಸಿರುವ ಕಾರಣ ಜಿಲ್ಲೆಯ ಹೋಬಳಿ ಮಟ್ಟದಲ್ಲಿರುವ ಎಲ್ಲಾ ರೈತ ಸಂಪರ್ಕ ಕೇಂದ್ರಗಳು ಲಾಕ್ ಡೌನ್ ಮುಗಿಯುವವರೆಗೂ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಪ್ರತಿನಿತ್ಯ ತೆರೆದಿರುತ್ತವೆ.
ಕೃಷಿ ಪರಿಕರಗಳನ್ನು ಖರೀದಿ ಮಾಡುವ ಹಾಗೂ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡುವ ರೈತರು ನಿಗಧಿ ಪಡಿಸಿದ ಸಮಯದೊಳಗೆ ಭೇಟಿ ನೀಡಿ, ಸವಲತ್ತುಗಳನ್ನು ಪಡೆಯಬಹುದಾಗಿದೆ ಎಂದು
ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರಾದ ಎಂ.ಎನ್. ರಾಜಸುಲೋಚನ ತಿಳಿಸಿದ್ದಾರೆ.