ಗುಬ್ಬಿ: ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಸಮುದಾಯವು ಮುಂದಾದಾಗ ಮಾತ್ರ
ಮುಖ್ಯ ವಾಹಿನಿಯಲ್ಲಿ ತಮ್ಮ ನೆಲೆಯನ್ನು ಕಾಣಬಹುದು ಎಂದು ಶಾಸಕ ಎಸ್. ಆರ್ ಶ್ರೀನಿವಾಸ್ ತಿಳಿಸಿದರು.
ಪಟ್ಟಣದಲ್ಲಿ ಕುರುಹಿನ ಶೆಟ್ಟಿ ನೇಕಾರರ ಸಂಘದ ವತಿಯಿಂದ ಏರ್ಪಡಿಸಿದ್ದ ಶಾಸಕರಿಗೆ ಅಭಿನಂದನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಕಡಿಮೆ ಸಂಖ್ಯೆಯಲ್ಲಿ ಇರುವ ಸಮುದಾಯಗಳು ಶೈಕ್ಷಣಿಕವಾಗಿ ಮುಂದುವರೆದು ಉನ್ನತ ಉದ್ದೇಗಳನ್ನು ಅಲಂಕರಿಸಬೇಕು. ಸಮಾಜದಲ್ಲಿ ಉತ್ತಮ ಸ್ಥಾನಮಾನ ಪಡೆಯಬೇಕು ಎಂದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿ ಲಕ್ಷ್ಮಿ ಅವರನ್ನು ಚೆಕ್ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿ.ಪಂ.ಮಾಜಿ ಸದಸ್ಯ ಜಗನ್ನಾಥ್, ಪಟ್ಟಣ ಪಂಚಾಯತಿ ಸದಸ್ಯರಾದ ಕುಮಾರ್, ರೇಣುಕಾ ಪ್ರಸಾದ್, ಮುಖಂಡರಾದ ಕೆಂಪೇಗೌಡ, ವೆಂಕಟೇಶ್ ಗೌಡ, ಅಶೋಕ್ ಕುಮಾರ್, ಸಮಾಜದ ಅಧ್ಯಕ್ಷರಾದ ಜಿ.ಎಸ್ ಕಾಂತರಾಜು, ಸಂಘದ ಪದಾಧಿಕಾರಿಗಳು ಇದ್ದರು.