Tumakuru: ತುಮಕೂರು ಖಾಸಗಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.
ಕೊಲೆಯಾದವನನ್ನು ಮುಬಾರಕ್ ಎಂದು ಗುರುತಿಸಲಾಗಿದೆ.
ಈತ ತುಮಕೂರು ನಗರದವನೇ ಆಗಿದ್ದು, ಗುಬ್ಬಿ ಗೇಟ್ ಬಳಿ ಹಮಾಲಿ ಕೆಲಸ ಮಾಡುತ್ತಿದ್ದನು.
ವೈಯಕ್ತಕ ಜಗಳ ಕೊಲೆಗೆ ಕಾರಣ ಎಂದು ಹೇಳಲಾಗುತ್ತಿದೆ.
ಬಸ್ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಕೊಲೆಯಾದ ಜಾಗದಲ್ಲಿ ಕುತೂಹಲದಿಂದ ನೆರೆದಿದ್ದರು.