Publicstory
Tumkuru: ನಗರದಾದ್ಯಂತ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಬುಧವಾರ ವೀಕ್ಷಿಸಿದರು.
ಕಾಮಗಾರಿಗಳ ಅವೈಜ್ಞಾನಿಕತೆ ಹಾಗೂ ವಿಳಂಬವಾಗಿರುವುದಕ್ಕೆ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಕಾಮಗಾರಿಗಳು ಅವೈಜ್ಞಾನಿಕತೆಯಿಂದ ಕೂಡಿವೆ. ಕಾಮಗಾರಿಗಳು ಮುಗಿಯುವ ಹಂತಕ್ಕೆ ಬರಬೇಕಾಗಿತ್ತು. ವಿಳಂಬವಾಗಲು ಕಾರಣವೇನು ಎಂದರು.
ರಿಂಗ್ ರಸ್ತೆ, ರೈಲ್ವೆ ಸ್ಟೇಷನ್ ರಸ್ತೆ, ರಾಧಾಕೃಷ್ಣ ರಸ್ತೆ, ಅಪೆಕ್ಸ್ ಬ್ಯಾಂಕ್ ಸಮೀಪ ನಿರ್ಮಾಣ ಮಾಡುತ್ತಿರುವ ರಸ್ತೆ ಕಾಮಗಾರಿಗಳು, ಮಹಾತ್ಮಗಾಂಧಿ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿ ಸೇರಿದಂತೆ ನಗರದ ವಿವಿಧೆಡೆ ಕಾಮಗಾರಿಗಳನ್ನು ವೀಕ್ಷಿಸಿದರು.
ಕಾಮಗಾರಿಗಳು ಕಳಪೆಯಿಂದ ಕೂಡಿವೆ.
ಫೆ. 6 ರೊಳಗೆ ಬಿ.ಹೆಚ್. ರಸ್ತೆ ಅಕ್ಕಪಕ್ಕದ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಳಿಸಬೇಕು. ಕಾಮಗಾರಿಗಳು ಗುಣಮಟ್ಟ ಹಾಗೂ ವೈಜ್ಞಾನಿಕತೆಯಿಂದ ಕೂಡಿರದಿದ್ದರೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಿಮಿಲ್ ಕೇಸು ಹಾಕಲು ಹಿಂದು ಮುಂದು ನೋಡುವುದಿಲ್ಲ ಎಂದು ಎಚ್ಚರಿಸಿದರು.
ನಾನು ಮತ್ತೆ ತುಮಕೂರಿಗೆ ಭೇಟಿ ನೀಡುವಷ್ಟರಲ್ಲಿ ಈ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿರಬೇಕು ಎಂದರು.
ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಂಡಿದ್ದೀರಾ ಎಂದು ಪ್ರಶ್ನಿಸಿದರು.
ಶಾಸಕ ಜಿ.ಬಿ. ಜ್ಯೋತಿಗಣೇಶ್, ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ರಂಗಸ್ವಾಮಿ, ಮಹಾನಗರ ಪಾಲಿಕೆಯ ಆಯುಕ್ತೆ ರೇಣುಕಾ, ಮೇಯರ್ ಫರೀದಾಬೇಗಂ, ಉಪಮೇಯರ್ ಶಶಿಕಲಾ ಗಂಗಹನುಮಯ್ಯ, ಟೂಡಾ ಆಯುಕ್ತ ಯೋಗಾನಂದ್, ಟೂಡಾ ಅಧ್ಯಕ್ಷ ಬಾವಿಕಟ್ಟೆ ನಾಗಣ್ಣ ಮತ್ತಿತರರು ಇದ್ದರು.