Wednesday, July 10, 2024
Google search engine
Homeಪೊಲಿಟಿಕಲ್ಯೋಧರನ್ನು ನೆನಪಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ : ಶಾಸಕ‌ ವೆಂಕಟರಮಣಪ್ಪ

ಯೋಧರನ್ನು ನೆನಪಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ : ಶಾಸಕ‌ ವೆಂಕಟರಮಣಪ್ಪ

Publicstory/prajayoga

– ವರದಿ, ಶ್ರೀನಿವಾಸಲು ಪಾವಗಡ

ಪಾವಗಡ: ಸ್ವಾತಂತ್ರ್ಯದ ವೇಳೆ ತ್ಯಾಗ ಬಲಿದಾನಗೈದ ಯೋಧರನ್ನು ನೆನಪಿಸಿಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದು ಶಾಸಕ ವೆಂಕಟರವಣಪ್ಪ ತಿಳಿಸಿದರು.

 ಪಟ್ಟಣದಲ್ಲಿ ಸೋಮವಾರ ನಡೆದ ಸ್ವತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಲವಾರು ಹೋರಾಟಗಾರರು  ಸ್ವಾತಂತ್ರ್ಯ ತರುವಲ್ಲಿ ತಮ್ಮ ಜೀವನವನ್ನೇ  ಮುಡುಪಿಟ್ಟಿದ್ದಾರೆ. ಅವರ ತ್ಯಾಗ ಬಲಿದಾನಗಳಿಂದ ನಮಗೆ ಸ್ವತಂತ್ರ್ಯ ಸಿಕ್ಕಿದೆ. ದೇಶದ ಅಭಿವೃದ್ಧಿಗಾಗಿ  ಭಾರತೀಯರಾದ ನಾವು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದರು.

ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಸುಶಿಕ್ಷಿತರನ್ನಾಗಿ ಮಾಡಬೇಕು . ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ತಹಶಿಲ್ದಾರ್ ವರದರಾಜು ಮಾತನಾಡಿ,  ತಾಲೂಕಿನಲ್ಲಿ ಹಲವು ಸ್ವಾತಂತ್ರ್ಯ ಯೋಧರು ತಮ್ಮದೇ ಆದ ಪಾತ್ರವಹಿಸಿದ್ದಾರೆ,. ಪೋರ್ಚುಗೀಸರು, ಡಚ್ಚರು, ಫ್ರೆಂಚರು, ಭಾರತಕ್ಕೆ ವ್ಯಾಪಾರ ಮಾಡಲು ಬಂದು, ನಂತರ ದೇಶವನ್ನು ಆಕ್ರಮಿಸಿಕೊಂಡರು. ನಂತರ ಬ್ರಿಟೀಷರು ದೇಶವನ್ನು ಕೊಳ್ಳೆ ಹೊಡೆದರು ಎಂದರು.

ಈ ವೇಳೆ ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಶಿವರಾಜಯ್ಯ, ಪುರಸಭೆ ಅಧ್ಯಕ್ಷ ವೇಲುರಾಜು, ಬಿಇಒ ಅಶ್ವಥನಾರಾಯಣ, ಆದರ್ಶ ಶಾಲೆಯ ಮುಖ್ಯ ಶಿಕ್ಷಕ ಜಿ.ವೆಂಕಟೇಶ್, ಪುರಸಭೆ ಉಪಾಧ್ಯಕ್ಷೆ ಜಾಹ್ನವಿ, ಸದಸ್ಯ ಎಂ ಎಜಿ ಇಮ್ರಾನ್, ಗೊರ್ತಿ ನಾಗರಾಜು, ನಾಗಭೂಷಣರೆಡ್ಡಿ, ತಾಲೂಕು ರೈತ ಸಂಘದ ಅಧ್ಯಕ್ಷ ನರಸಿಂಹರೆಡ್ಡಿ, ತಾಲ್ಲೂಕು ವೈದ್ಯಾಧಿಕಾರಿ ತಿರುಪತಯ್ಯ, ವೈದ್ಯಾಧಿಕಾರಿ ಕಿರಣ್, ಪೊಲೀಸ್ ಇನ್ಸ್ ಪೆಕ್ಟರ್ ಅಜಯಸಾರಥಿ, ಕಾಂತರೆಡ್ಡಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?