Friday, November 22, 2024
Google search engine
Homeಸುದ್ದಿಗೋಷ್ಠಿಬೊಮ್ಮಾಯಿ ಸಿಎಂ ಆದ ಮೇಲೆ ಹದಗೆಟ್ಟ ಕಾನೂನು ಸುವ್ಯವಸ್ಥೆ : ಗುರುಮೂರ್ತಿ ಆಕ್ರೋಶ

ಬೊಮ್ಮಾಯಿ ಸಿಎಂ ಆದ ಮೇಲೆ ಹದಗೆಟ್ಟ ಕಾನೂನು ಸುವ್ಯವಸ್ಥೆ : ಗುರುಮೂರ್ತಿ ಆಕ್ರೋಶ

Publicstory/prajayoga

ತುಮಕೂರು:  ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕಿ ಗಲಭೆಗೆ ಕಾರಣರಾದ ಬಜರಂಗದಳದ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಲ್ಲಿ  ರಾಜ್ಯ ಸರ್ಕಾರ ವಿಫಲವಾಗಿದ್ದು ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಮೇಲೆ ಇಂತಹ ಘಟನೆಗಳು ಹೆಚ್ಚುತ್ತ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಗುರುಮೂರ್ತಿಯವರು ಆಕ್ರೋಶ ವ್ಯಕ್ತಪಡಿಸಿದರು.

 ನಗರದ ಎಂಜಿ ರಸ್ತೆಯ ಅಂಬೇಡ್ಕರ್ ಭವನದಲ್ಲಿ  ಸುದ್ದಿಗೋಷ್ಠಿ ಬುಧವಾರ ನಡೆಸಿ ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳನ್ನು ಖಂಡಿಸಿ ಮಾತನಾಡಿದರು.

ಬಜರಂಗದಳದ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ಮುಸ್ಲಿಂ ಪ್ರಾಬಲ್ಯವಿರುವ ಸ್ಥಳಗಳಲ್ಲಿ ಅಂದರೆ, ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಸಾವರ್ಕರ್ ಫ್ಲೆಕ್ಸ್ ಅಳವಡಿಸಿದ್ದಾರೆ. ಇದರಿಂದ ದುಷ್ಕರ್ಮಿಗಳು ಚೂರಿ ಹಾಕಿದ್ದಾರೆ.  ಈ ಹಿಂದೆ ಶಿವಮೊಗ್ಗದಲ್ಲಿ ಹರ್ಷನ ಕೊಲೆ ನಡೆದು ರಾಜ್ಯದ್ಯಂತ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿ ಘಟನೆ ಮಾಸುವ ಮುನ್ನವೇ ಮಂಗಳೂರಿನಲ್ಲಿ ಮೂರು ಸರಣಿ ಹತ್ಯೆಗಳು ನಡೆದು ರಾಜ್ಯಾದ್ಯಂತ ಅಶಾಂತ ವಾತಾವರಣ ಸೃಷ್ಟಿಯಾಗಿತ್ತು. ಈಗ ಮತ್ತೆ ಉದ್ದೇಶಪೂರ್ವಕವಾಗಿ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸುವ ಸಂಚಿನ ಭಾಗವಾಗಿ ಶಿವಮೊಗ್ಗದಲ್ಲಿ ವಿವಾದ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುವ ಬದಲು ವಿವಾದಗಳನ್ನು ಇಟ್ಟುಕೊಂಡು ಚುನಾವಣೆಗೆ ಹೋಗುವ ಮುನ್ನ ಹುನ್ನಾರ ನಡೆಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

 ಪಿಎಸ್ಐ ನೇಮಕಾತಿ ಹಗರಣ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹಗರಣ 40 ಪರ್ಸೆಂಟ್ ಕಮಿಷನ್ ಆರೋಪ ಹಾಗೂ ಸ್ವತಃ ಬಿಜೆಪಿ ಸರ್ಕಾರದ ಕಾನೂನು ಮಂತ್ರಿ ಮಾಧುಸ್ವಾಮಿ ಹೇಳಿದಂತೆ ಸರ್ಕಾರ ನಿಷ್ಕ್ರಿಯವಾಗಿದ್ದು, ವಿವಾದಗಳಿಂದ ತತ್ತರಿಸುವ ಬಿಜೆಪಿಯು ರಾಜ್ಯದಲ್ಲಿ ಕೋಮು ಗಲಭೆಗಳನ್ನು ಸೃಷ್ಟಿಸಿ ಜನರನ್ನು ದಿಕ್ಕುತಪ್ಪಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ತಂತ್ರ ನಡೆಸುತ್ತಿದೆ ಎಂದು ಅವರು ತಿಳಿಸಿದರು.

ಬಿಎಸ್ಪಿ ಪಕ್ಷದ ಜಿಲ್ಲಾಧ್ಯಕ್ಷ ರಾಜಸಿಂಹ ಮಾತನಾಡಿ, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಕೋಮು ಗಲಭೆಗಳನ್ನು ಸೃಷ್ಟಿಸುತ್ತಿದೆ. ಅಭಿವೃದ್ಧಿಯ ಕಡೆಗೆ ಗಮನ ಹರಿಸದೆ ದೇಶದಲ್ಲೆಡೆ ದಲಿತರು ಮತ್ತು ದಮನಿತರು ಮೇಲೆ ಶೋಷಣೆಗಳನ್ನು ಹೆಚ್ಚಿಸುವ ವಾತಾವರಣ ನಿರ್ಮಾಣ ಮಾಡಿದೆ. ಇದಕ್ಕೆ ಪೂರಕವಾಗಿ ರಾಜಸ್ಥಾನದಲ್ಲಿ ಕುಡಿಯುವ ನೀರಿನ ಮಡಿಕೆ ಮುಟ್ಟಿದ ಕಾರಣಕ್ಕೆ ಮುಖ್ಯ ಶಿಕ್ಷಕನಿಂದ ಹಲ್ಲೆಗೊಳಗಾದ ದಲಿತ ವಿದ್ಯಾರ್ಥಿ ಪ್ರಾಣ ಕಳೆದುಕೊಂಡಿರುವ ಘಟನೆ ಸಾಕ್ಷಿಯಾದೆ. ಹಿಂದೂ ಕಾರ್ಯಕರ್ತರ ಹಾಗೂ ಬಜರಂಗದಳದ ಕಾರ್ಯಕರ್ತರ ಕೊಲೆಗಳು ನಡೆದಾಗ ತಕ್ಷಣವೇ ಪ್ರತಿಕ್ರಿಯಿಸಿರುವ ಬಿಜೆಪಿ ಪಕ್ಷದ ಮುಖಂಡರುಗಳು ದಲಿತರ ಮೇಲೆ ನಿಷ್ಕಾಳಜಿ ವಹಿಸಿದ್ದಾರೆ. ದಲಿತರನ್ನು ತುಳಿಯುತ್ತಿರುವುದು ಖಂಡನೀಯವಾಗಿದೆ. ಇಂಥ ದಲಿತ ವಿರೋಧಿ ನೀತಿಯನ್ನು ಬಹುಜನ ಸಮಾಜ ಪಕ್ಷ ಖಂಡಿಸುತ್ತದೆ ಎಂದು ತಿಳಿಸಿದರು.

 ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಎಸ್ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಗಧಾಮಯ್ಯ, ರಾಜ್ಯ ಕಾರ್ಯದರ್ಶಿ ಸುರಯ್ಯ ಜಿಲ್ಲಾ ಸಂಯೋಜಕರಾದ ರುದ್ರಯ್ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಗಧಾಮಯ್ಯ ವೀರಯ್ಯ ಹನುಮಂತರಾಯಪ್ಪ ಸೇರಿದಂತೆ ಬಿಎಸ್ಪಿ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

ಇನ್ಸ್ಪೆಕ್ಟರ್ ಸಲ್ಮಾನ್ ಕೆ ಎನ್ on ಕ್ರೀಡಾಕೂಟ ಝಲಕ್
Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?