Publicstory/prajayoga
ತಿಪಟೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾ ಶುಲ್ಕವನ್ನು ಹೆಚ್ಚಳ ಮಾಡಿರುವ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿ ಎನ್ಎಸ್‌ಯುಐ ವತಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ ನಗರದ ಹೋಟೆಲ್ ವೃತ್ತದಲ್ಲಿ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿದರು.
ಪೈ ಹೋಟೆಲ್ ವೃತ್ತದಲ್ಲಿ ನಗರ ತಾಲೂಕು ಕಾಂಗ್ರೆಸ್ ಅಧ್ಯಕ್ಷ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಹಿಂದೆ ಇದ್ದಂತಹ ಸರ್ಕಾರಗಳು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸ್ಕಾಲರ್ ಶಿಪ್ ಗಳನ್ನು ಉಚಿತವಾಗಿ ನೀಡುತ್ತಿದ್ದವು. ಬಡ ಮಕ್ಕಳು ಓದಬೇಕು ಎಂಬ ಉದ್ದೇಶದಿಂದ ನೀಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಪರೀಕ್ಷಾ ಶುಲ್ಕವನ್ನು ದಿಢೀರ್ 1ಸಾವಿರ ಹೆಚ್ಚಳ ಮಾಡಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಇದನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದು ಆಗ್ರಹ ಮಾಡಿದರು ಎಚ್ಚರಿಕೆ ನೀಡಿದರು.
ಈ ವೇಳೆ ತಾಲೂಕು ಉಪ ತಹಶಿಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನಾ ರ್ಯಾಲಿಯಲ್ಲಿ ಎನ್ ಎಸ್ ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಮಂತ್ ನಗರಸಭಾ ಮಾಜಿ ಅಧ್ಯಕ್ಷ ಪ್ರಕಾಶ್ ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು.