Wednesday, July 10, 2024
Google search engine
Homeಪೊಲಿಟಿಕಲ್ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ; ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ; ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ

Publicstory/prajayoga

ತುಮಕೂರು: ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಅವರ 75ನೇ ಜನ್ಮ ಜಯಂತಿಯಲ್ಲಿ ಭಾಗವಹಿಸಿದ್ದ 10 ಲಕ್ಷ ಕ್ಕೂ ಹೆಚ್ಚು ಜನರನ್ನು ನೋಡಿರುವ ಬಿಜೆಪಿಗೆ ನಿದ್ದೆ ಬರುತ್ತಿಲ್ಲ. ಹಾಗಾಗಿ ಪ್ರಧಾನಿ ನರೇಂದ್ರಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಆಣತಿಯಂತೆ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುವ ಕೆಲಸ ಮಾಡಲಾಗುತ್ತಿರುವುದು ಖಂಡನೀಯ ಎಂದು ಮಾಜಿ ಸಚಿವ ಟಿಬಿ ಜಯಚಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಬಜರಂಗದಳ ಹಾಗು ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಅಪಮಾನಿಸಿರುವುದನ್ನು ಖಂಡಿಸಿ ಇಂದು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದವತಿಯಿಂದ ನಗರದ ಟೌನ್ಹಾಲ್ ವೃತ್ತದಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ವಿರೋಧ ಪಕ್ಷದ ನಾಯಕ ಎಂಬುದು ಒಂದು ಸಾಂಮಿಧಾನಿಕ ಹುದ್ದೆ. ಇದರ ಬಗ್ಗೆ ಅಗೌರವದಿಂದ ನಡೆದುಕೊಳ್ಳುವುದು ತರವಲ್ಲ. ಸಾರ್ವಕರ್ ಬಗ್ಗೆಯ ಸಿದ್ದರಾಮಯ್ಯ ಹೇಳಿಕೆ ಅರಗಿಸಿಕೊಳ್ಳಲು ಆಗದಿದ್ದರೆ ಸಾರ್ವಜನಿಕ ಚರ್ಚೆಗೆ ಬನ್ನಿ ಎಂದು ಬಿಜೆಪಿಯವರಿಗೆ ಬಹಿರಂಗ ಸವಾಲು ಹಾಕಿದರು.

ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಮಾತನಾಡಿ, ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಯ ಮಳೆ ಹಾನಿಯ ಅಧ್ಯಯನ ಪ್ರವಾಸದ ಸಂದರ್ಭದಲ್ಲಿ ಬಜರಂಗದಳ, ಬಿಜೆಪಿ ಕಾರ್ಯಕರ್ತರು ಕಾರಿನ ಮೇಲೆ ಮೊಟ್ಟೆ ಎಸೆದು ಅಪಮಾನ ಮಾಡಿರುವುದು ಖಂಡನೀಯ. ಇದು ಸರ್ಕಾರ ಭದ್ರತಾ ಲೋಪ ಎಸಗಿರುವುದಕ್ಕೆ ಸ್ಪಷ್ಟವಾದ ಉದಾಹರಣೆ. ಕಾಂಗ್ರೆಸ್ ಕಾರ್ಯಕರ್ತರಿಗೂ ಮುಖ್ಯಮಂತ್ರಿ, ಗೃಹ ಸಚಿವರು ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಓಡಾಡುವಾಗ ಮೊಟ್ಟೆ ಎಸೆಯಲು ಬರುತ್ತದೆ. ಆದರೆ ಆ ರೀತಿಯ ಕೆಟ್ಟ ಕೆಲಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಎಂದಿಗೂ ಕೈ ಹಾಕುವುದಿಲ್ಲ ಎಂದರು.

ಮೊಟ್ಟೆಯ ಬದಲು, ಕಲ್ಲು ಅಥವಾ ಬಾಂಬ್ ಎಸೆದಿದ್ದರೆ ಏನು ಗತಿ? ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಈ ವೇಳೆ ಒತ್ತಾಯಿಸಿದರು.

2008ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಐದು ವರ್ಷಗಳ ಅಧಿಕಾರವಧಿ ಯಲ್ಲಿ ಇಲ್ಲದ ಸಾರ್ವಕರ್, ಈಗ ಉದ್ಬವಿಸಲು ಕಾರಣ ಎನು? ಸೋಲಿನ ಭೀತಿಯಲ್ಲಿರುವ ಬಿಜೆಪಿ ಹೇಗಾದರೂ ಮಾಡಿ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ಮತಗಳಿಸುವ ತಂತ್ರಗಾರಿಕೆಯ ಭಾಗವಾಗಿ ಸಾರ್ವಕರ್ ಫೋಟೋ ಬಳಕೆ ಮಾಡುತ್ತಿದೆ. ಅಲ್ಲದೆ ರಾಷ್ಟ್ರಪಿತ ಮಹಾತ್ಮಗಾಂಧಿಯನ್ನು ಕೊಂದ ನಾಥೂರಾಮ್ ಗೂಡ್ಸೆ ಅವರ ಫೋಟೋ ಹಾಕಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ, ರಾಜ್ಯದಲ್ಲಿ ಕೋಮುದ್ವೇಷ ಹರಡಲು ಸರ್ಕಾರ ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿದೆ ಎಂದು ಆರ್.ರಾಜೇಂದ್ರ ಆರೋಪಿಸಿದರು.

ಪ್ರತಿಟನೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಕೆಂಪರಾಜು,ಚಂದ್ರಶೇಖರಗೌಡ, ಗುರುಪ್ರಸಾದ್,ಹೆಬ್ಬೂರು ಶ್ರೀನಿವಾಸ ಮೂರ್ತಿ, ಮೈಲಾರಪ್ಪ,ದಸಂಸದ ಪಿ.ಎನ್.ರಾಮಯ್ಯ, ಜಯಮೂರ್ತಿ,ರಾಜೇಶ್ ದೊಡ್ಡಮನೆ, ಎಂ.ವಿ.ರಾಘವೇಂದ್ರಸ್ವಾಮಿ ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.

ಸರ್ಕಾರ ಕೂಡಲೇ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದು ಅಪಮಾನ ಮಾಡಿರುವ ವ್ಯಕ್ತಿಗಳನ್ನು ಬಂಧಿಸಿ, ಗಡಿಪಾರು ಮಾಡಬೇಕು ಹಾಗೂ ಇಂತಹ ಘಟನೆ ಮರುಕಳುಹಿಸದಂತೆ ಕಟ್ಟು ನಿಟ್ಟಿನ ಭ್ರದತೆ ನೀಡಬೇಕೆಂದು ಆಗ್ರಹಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?