Tuesday, December 10, 2024
Google search engine
Homeಪೊಲಿಟಿಕಲ್ಮಹಾತ್ಮ ಗಾಂಧಿ ಪುಸ್ತಕ ಪ್ರದರ್ಶನಕ್ಕೆ ಮುರಳೀಧರ ಹಾಲಪ್ಪ‌ ಶ್ಲಾಘನೆ

ಮಹಾತ್ಮ ಗಾಂಧಿ ಪುಸ್ತಕ ಪ್ರದರ್ಶನಕ್ಕೆ ಮುರಳೀಧರ ಹಾಲಪ್ಪ‌ ಶ್ಲಾಘನೆ

Publicstory/prajayoga

ತುಮಕೂರು: ಜಿಲ್ಲೆಯ ಯುವಕರು ಮತ್ತು ವಿದ್ಯಾರ್ಥಿಗಳಿಗಾಗಿ ಮಹಾತ್ಮ ಗಾಂಧೀಜಿಯವರ ಜೀವನ ಚರಿತ್ರೆ, ಸ್ವಾತಂತ್ರ್ಯ ಸಂಗ್ರಾಮದಂತಹ ಅನೇಕ ಮಜಲುಗಳನ್ನು ತಿಳಿಸುವ ಪುಸ್ತಕ ಪ್ರದರ್ಶನ ಮತ್ತು ರಿಯಾಯಿತಿ ದರದ ಮಾರಾಟ ಹಮ್ಮಿಕೊಂಡಿರುವುದು  ಶ್ಲಾಘನೀಯ ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಹಾಲಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಬಾಪೂಜಿ ರವೀಂದ್ರ ಕಲಾನಿಕೇತನದಲ್ಲಿ ಆಗಸ್ಟ್ 15ರಿಂದ ಆಗಸ್ಟ್ 20ರವರೆಗೆ ಹಮ್ಮಿಕೊಂಡಿದ್ದ ರಾಷ್ಟ್ರಪಿತ ಮಹಾತ್ಮಗಾಂಧೀಜಿ ಕುರಿತ ಪುಸ್ತಕಗಳ ಪ್ರದರ್ಶನ ಮತ್ತು ರಿಯಾಯಿತಿ ದರದಲ್ಲಿ ಮಾರಾಟ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿನ ಮೇಲು, ಕೀಳೆಂಬ ತಾರತಮ್ಯ ನಿವಾರಣೆಗೆ ಶ್ರಮಿಸಿ, ಕರಿಯರು ಬಿಳಿಯರಿಗೆ ಸನ್ಮಾರ್ಗ ಕಲ್ಪಿಸಿ, ಮಾನವೀಯ ಮೌಲ್ಯ ಎತ್ತಿ ಹಿಡಿದವರು ಮಹಾತ್ಮ ಗಾಂಧೀಜಿ. ಹಾಗಾಗಿ ಇವರ ಚರಿತ್ರೆಯನ್ನು ಪ್ರತಿಯೊಬ್ಬ ಯುವಕರು ಮತ್ತು ವಿದ್ಯಾರ್ಥಿಗಳು ತಿಳಿದುಕೊಳ್ಳುವ ಅವಶ್ಯಕತೆ ಇದೆ ಎಂದರು.

ಈ ವೇಳೆ ಬಾಪೂಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಂ.ಬಸವಯ್ಯ, ಟೂಡಾ ಮಾಜಿ ಅಧ್ಯಕ್ಷ ಸಿದ್ಧಲಿಂಗೇಗೌಡ, ಕುಂಚಿಟಿಗ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ದೊಡ್ಡಲಿಂಗಪ್ಪ, ಮುಖಂಡರಾದ ಸಂಜೀವ್‌ಕುಮಾರ್, ನಟರಾಜಶೆಟ್ಟಿ, ಪ್ರಕಾಶ್, ಆದಿಲ್‌ಖಾನ್, ಉಮಾಶಂಕರ್, ದಿಲೀಪ್ ಮುಂತಾದವರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

ಇನ್ಸ್ಪೆಕ್ಟರ್ ಸಲ್ಮಾನ್ ಕೆ ಎನ್ on ಕ್ರೀಡಾಕೂಟ ಝಲಕ್
Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?