Publicstory/prajayoga
ತಿಪಟೂರು: ಭಾರೀ ಮಳೆಯಿಂದ ಕೊಡಗಿನಲ್ಲಿ ಮನೆ ಕಳೆದುಕೊಂಡವರ ಮನೆಗಳಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ನವರ ಕಾರಿನ ಮೇಲೆ ಮೊಟ್ಟೆ ಎಸೆದ ಹಿನ್ನೆಲೆ ರಾಜ್ಯದಲ್ಲಿ ಕಳೆದ 4ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿದ್ದು ಇಂದು ನಗರದ ಸಿಂಗ್ರಿ ನಂಜಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಈ ವೇಳೆ ತಿಪಟೂರು ಮಾಜಿ ಶಾಸಕ ಕೆ ಷಡಕ್ಷರಿ ಮಾತನಾಡಿ, ಬಿಜೆಪಿ ಸರಕಾರದಿಂದ ಬಡ ಜನರಿಗೆ ಆಗಿರುವ ತೊಂದರೆ ಹೇಳತೀರದು. ಇವರು ಅಧಿಕಾರದ ಆಸೆಗಾಗಿ ಇಲ್ಲಸಲ್ಲದ ಸುಳ್ಳುಗಳನ್ನು ಹೇಳುತ್ತಾ ಭಾಷಣಗಳನ್ನು ಮಾಡುತ್ತಾ ಸರ್ಕಾರವನ್ನು ನಡೆಸುತ್ತಾರೆ. ರಾಜ್ಯಾದಾದ್ಯಂತ ಜನರು ಅತಿವೃಷ್ಟಿಯಿಂದ ಬೆಳೆ ಇಲ್ಲದೆ ಸಂಕಷ್ಟದಲ್ಲಿದ್ದಾರೆ. ಜನರಿಗೆ ನೆರವಾಗಬೇಕಿದ್ದ ಸರ್ಕಾರ ರಾಜಕೀಯ ಮಾಡುತ್ತಾ ಜನರನ್ನು ಸಂಕಷ್ಟಕ್ಕೆ ದೂಡುತ್ತಿದೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ತಾಲ್ಲೂಕು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಕಾಂತರಾಜು ಅಲ್ಪಸಂಖ್ಯಾತರ ಮುಖಂಡ ಸೈಫುಲ್ಲಾ ಬಜಗೂರು ಮಂಜುನಾಥ್, ಸುನೀಲ್, ಕಾಂತರಾಜು ಲೋಕ್ ನಾಥ್ ಸಿಂಗ್ ಮತ್ತಿತರರು ಭಾಗಿಯಾಗಿದ್ದರು.