Publicstory/prajayoga
ತುಮಕೂರು: ಜಿಲ್ಲಾ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿವಿಧ ೮ ಯೋಜನೆಗಳಿಗೆ ಸುವಿಧ ತಂತ್ರಾಂಶದಡಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ್ ಯೋಜನೆ, ಪುನರ್ವಸತಿ ಕಾರ್ಯಕರ್ತರ ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ ಹಾಗೂ ವೈದ್ಯಕೀಯ ಪರಿಹಾರ ನಿಧಿ ಯೋಜನೆ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು URL:https://suvidha.karnataka.gov ಜಾಲತಾಣದ ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಹಾಗೂ ಅರ್ಜಿ ಸಲ್ಲಿಸಿರುವ ಸ್ವೀಕೃತಿಯೊಂದಿಗೆ ಹಾರ್ಡ್ ಪ್ರತಿಯನ್ನು ದ್ವಿಪ್ರತಿಯಲ್ಲಿ ಆಯಾ ತಾಲ್ಲೂಕು ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶಿ ಪುನರ್ವಸತಿ ಕಾರ್ಯಕರ್ತರು (ಎಂಆರ್‌ಡಬ್ಲ್ಯೂ) ರವರಿಗೆ ಸೆಪ್ಟೆಂಬರ್ 20 ರೊಳಗಾಗಿ ಸಲ್ಲಿಸಬಹುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಎಂ.ರಮೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.