Saturday, July 27, 2024
Google search engine
Homeಪೊಲಿಟಿಕಲ್ಕಾರ್ಯಕರ್ತರ ಗುರಿ ಪಕ್ಷ ಅಧಿಕಾರಕ್ಕೆ ತರುವುದು: ಜಯಕುಮಾರ್

ಕಾರ್ಯಕರ್ತರ ಗುರಿ ಪಕ್ಷ ಅಧಿಕಾರಕ್ಕೆ ತರುವುದು: ಜಯಕುಮಾರ್

Publicstory/prajayoga

ತುಮಕೂರು: ಬ್ಲಾಕ್ ಕಮಿಟಿ, ವಿಲೇಜ್ ಕಮಿಟಿಗಳನ್ನು ಸಶಕ್ತಗೊಳಿಸುವ ಮೂಲಕ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರ ಹಿಡಿಯುವಂತೆ ಮಾಡುವುದು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಗುರಿಯಾಗಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಯೂರ ಜಯಕುಮಾರ್ ಕರೆ ನೀಡಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್‌ನ ಹಿರಿಯ ಮುಖಂಡರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವವರಿದ್ದಾರೆ. ಅಂತಹವರನ್ನು ಗುರುತಿಸಿ, ಅವರ ಮತಗಳು ಕಾಂಗ್ರೆಸ್ ಪಕ್ಷದತ್ತ ಸೆಳೆಯುವ ಕೆಲಸವನ್ನು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮಾಡಬೇಕಿದೆ. ಬಿಜೆಪಿಯ ಆಡಳಿತದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ. ಬಿಜೆಪಿಯ ವಿರುದ್ದ ಮತಗಳು ಎಂದಿಗೂ ಜೆಡಿಎಸ್ ಪಕ್ಷದ ಪಾಲಾಗದಂತೆ ನಾವೆಲ್ಲರೂ ಎಚ್ಚರಿಕೆ ವಹಿಸಬೇಕಿದೆ. ಬ್ಲಾಕ್ ಕಮಿಟಿ ಮತ್ತು ವಿಲೇಜ್ ಕಮಿಟಿಗಳು ಬಲಗೊಂಡರೆ, ಸುಲಭವಾಗಿ ಮತದಾರರನ್ನು ಸೆಳೆಯಬಹುದೆಂದರು.

ಬ್ಲಾಕ್ ಮತ್ತು ವಿಲೇಜ್ ಕಮಿಟಿಗಳು ಪಕ್ಷದ ಆಧಾರ ಸ್ತಂಭಗಳಿದ್ದಂತೆ ಹಾಗಾಗಿ ಜಿಲ್ಲೆಯಲ್ಲಿರುವ ಎಲ್ಲಾ 22 ಬ್ಲಾಕ್‌ಗಳಿಗೂ ಮುಂದಿನ 15 ದಿನಗಳ ಒಳಗೆ ಪದಾಧಿಕಾರಿಗಳ ನೇಮಕ ಮಾಡುವುದು ಕಡ್ಡಾಯ. ಇದರ ಜೊತೆಗೆ ಜಿಲ್ಲಾ ಕಾಂಗ್ರೆಸ್‌ಗೆ ಸಂಘಟನಾ ಕಾರ್ಯದರ್ಶಿಗಳನ್ನು ನೇಮಕ ಮಾಡಬೇಕಾಗಿದೆ.ಬೇರೆ ಜಿಲ್ಲೆಗಳಿಗೆ ಹೊಲಿಕೆ ಮಾಡಿದರೆ ತುಮಕೂರು ದೊಡ್ಡ ಜಿಲ್ಲೆ, ಹಾಗೂ ರಾಜಕೀಯವಾಗಿಯೂ ವಿಭಿನ್ನವಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮಾತನಾಡಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹೇಳಿದಂತೆ ಚುನಾವಣಾ ವರ್ಷವಾಗಿರುವುದರಿಂದ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕೆಲಸ ಮಾಡಬೇಕಿದೆ. ಸಕ್ರಿಯವಾಗಿರುವ ಪದಾಧಿಕಾರಿಗಳಿಗೆ ಪ್ರೋತ್ಸಾಹ ನೀಡಿ,ನಿಷ್ಕ್ರಿಯ ಪದಾಧಿಕಾರಿಗಳನ್ನು ಬದಲಾಯಿಸಿ, ಹೊಸಬರನ್ನು ನೇಮಿಸುವ ಕೆಲಸ ಶೀಘ್ರದಲ್ಲಿಯೇ ಆಗಲಿದೆ. ಯುವ ಕಾಂಗ್ರೆಸ್, ಎನ್.ಎಸ್.ಯು.ಐ ಸೇರಿದಂತೆ ವಿವಿಧ ಮಂಚೂಣಿ ಘಟಕಗಳು ಸಕ್ರಿಯವಾಗಿ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ಡಾ.ಎಚ್.ಡಿ.ರಂಗನಾಥ್, ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ,  ಮಾಜಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಶಾಸಕರಾದ ಕೆ.ಷಡಕ್ಷರಿ, ಎಸ್.ಷಪಿ ಅಹಮದ್, ವಿಧಾನಪರಿಷತ್ ಸದಸ್ಯ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಆರ್.ರಮೇಶ್, ಕೆಂಚಮಾರಯ್ಯ, ಎಸ್.ವಿ.ವೆಂಕಟೇಶ್,ಕೆಪಿಸಿಸಿ ಉಸ್ತುವಾರಿ ಕೇಶವಮೂರ್ತಿ,ಬಾಲಕೃಷ್ಣ ಮತ್ತಿತರರು ಪಾಲ್ಗೊಂಡಿದದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?