Publicstory/prajayoga
ತುಮಕೂರು : ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅರುಣೋದಯ ಶೈಕ್ಷಣಿಕ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಮತ್ತು ಗುರುಸಿದ್ಧರಾಮೇಶ್ವರ ಸಾಹಿತ್ಯ ಸಂಪದ ಸಹಯೋಗದೊಂದಿಗೆ ಆಗಸ್ಟ್ 27ನೇ ಶನಿವಾರ ಬೆಳಿಗ್ಗೆ 10.30ಕ್ಕೆ ಅಮಾನಿಕೆರೆ ಮುಂಭಾಗದ ಕನ್ನಡ ಭವನದಲ್ಲಿ ಡಾ.ದಿನೇಶ್ ಕುಮಾರ್.ಪಿ.ಎನ್. ಅವರ “ಹೊಸದುರ್ಗ ಪ್ರದೇಶದ ಪಾಳೇಯಗಾರರು” ಕೃತಿ ಲೋಕಾರ್ಪಣೆಗೊಳ್ಳಲಿದೆ ಎಂದು ಆಹ್ವಾನ ಪತ್ರಿಕೆಯಲ್ಲಿ ತಿಳಿಸಲಾಗಿದೆ.
ಕಾರ್ಯಕ್ರಮವನ್ನು ರಾಜ್ಯಸಭಾ ಸದಸ್ಯರಾದ ಡಾ.ಎಲ್.ಹನುಮಂತಯ್ಯನವರು ಉದ್ಘಾಟಿಸಲಿದ್ದು, ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಎಂ.ವೆಂಕಟೇಶ್ವರಲು ಉಪಸ್ಥಿತಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ರಾಎಸ್.ಸಿದ್ಧಲಿಂಗಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಕೃತಿ ಲೋಕಾರ್ಪಣೆಯನ್ನು ತುಮಕೂರು ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ನಿರ್ಮಲ್ರಾಜ್ ಮಾಡಲಿದ್ದು, ಕೃತಿ ಕುರಿತು ಸಿದ್ಧಗಂಗಾ ಪದವಿ ಕಾಲೇಜುಗಳ ಸಂಯೋಜಕ ಡಾ.ಡಿ.ಎನ್.ಯೋಗೀಶ್ವರಪ್ಪ ಮತ್ತು ತುಮಕೂರು ವಿ.ವಿ.ಯ ಇತಿಹಾಸ ವಿಭಾಗದ ಪ್ರೊ.ಎಲ್.ಪಿ.ರಾಜು ಮಾತನಾಡಲಿದ್ದಾರೆ.
ಈ ಸಂದರ್ಭದಲ್ಲಿ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಪ್ರಿಯಾ ಠಾಕೂರ್ ಅವರನ್ನು ಸನ್ಮಾನಿಸಲಿದ್ದು, ಲೇಖಕರಾದ ಡಾ.ದಿನೇಶ್ಕುಮಾರ್ ಉಪಸ್ಥಿತಿಯಿರುವರು.
ಮುಖ್ಯ ಅತಿಥಿಗಳಾಗಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶ್ ಕುಮಾರ್, ಎಸ್.ಹೊಸಮನಿ, ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಯ ಸಹಾಯಕ ಅಭಿಯೋಗ ನಿರ್ದೇಶಕರ ಜಿ.ಬಸವರಾಜು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರ ದೊಡ್ಡಮನೆ ಗೋಪಾಲಗೌಡರು, ಪ್ರಾಧ್ಯಾಪಕರಾದ ಡಾ.ಓ.ನಾಗರಾಜು, ಡಾ.ಶಿವನಂಜಯ್ಯ, ಆಯುರ್ವೇದ ವೈದ್ಯರಾದ ಡಾ.ಬಿ.ನಂಜುಂಡಸ್ವಾಮಿ ಸೇರಿದಂತೆ ಹಲವರು ಇರಲಿದ್ದಾರೆ.