Publicstory/prajayoga
ಕುಣಿಗಲ್: ತಾಲೂಕಿನ ಹುತ್ರಿದುರ್ಗ ಬಳಿಯ ಶಿವಪುರ ಗ್ರಾಮದಲ್ಲಿ ಯುವಕನೊಬ್ಬ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಾವನ್ನಪ್ಪಿರುವ ದುರ್ದೈವಿ ನಾಗರಾಜು (28) ಎಂದು ತಿಳಿದು ಬಂದಿದೆ. ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಅನಾಹುತಗಳು ಸಂಭವಿಸುತ್ತಿದ್ದು, ಇತ್ತೀಚೆಗೆ ತುಮಕೂರು ನಗರದ ವ್ಯಕ್ತಿಯೊಬ್ಬರು ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದರು.
ಚಿಕ್ಕ ನಾಯಕನಹಳ್ಳಿ ತಾಲೂಕಿನ ಮಾದಾಪುರ ತಾಂಡ್ಯದ ನಾಗರಾಜು ಚೆಕ್ ಡ್ಯಾಮ್ ನಿರ್ಮಾಣದ ಕೂಲಿ ಕೆಲಸಕ್ಕಾಗಿ ಬಂದಿದ್ದರು. ಶಿವಪುರ ಹಾಗೂ ದೀಪಾಂಬುದಿ ಕರೆ ತುಂಬಿ ರಭಸವಾಗಿ ಹರಿಯುತ್ತಿದ್ದ ಕಾಲುವೆಯಲ್ಲಿ ಜಾರಿ ಬಿದ್ದು ಸಾವನ್ನಪ್ಪಿದ್ದಾನೆ.
ಚೆಕ್ ಡ್ಯಾಮ್ ಕಾಮಗಾರಿಯ ಶೆಡ್ ನಲ್ಲಿ ಮಲಗಿದ್ದ ವೇಳೆ ರಾತ್ರಿ ಮೂತ್ರವಿಸರ್ಜನೆಗೆಂದು ಹೊರ ಬಂದಿದ್ದಾರೆ. ಈ ಸಂದರ್ಭ ಕತ್ತಲಲ್ಲಿ ತಿಳಿಯದೆ ಈ ಘಟನೆ ನಡೆಸಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.