Publicstory/prajayoga
ತುಮಕೂರು: ಗ್ರಾಮಾಂತರದ, ಹೊನ್ನುಡಿಕೆ , ಹೊಳಕಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳ್ಳೆನಹಳ್ಳಿ ಕೆರೆಗೆ ಶಾಸಕ ಡಿಸಿ ಗೌರಿಶಂಕರ್ ಬುಧವಾರ ಗಂಗಾಪೂಜೆ ನೆರವೇರಿಸಿದರು.
ಕರೆಯು ಸುಮಾರು 23 ವರ್ಷಗಳ ನಂತರ ತುಂಬಿ ಕೋಡಿ ಹರಿಯುತ್ತಿದೆ. ಗಂಗಾ ಪೂಜೆಯ ವೇಳೆ 500 ಕ್ಕೂ ಹೆಚ್ಚು ಹೆಣ್ಣು ಮಕ್ಕಳಿಗೆ ಹಿಂದೂ ಸಂಪ್ರದಾಯದಂತೆ ಬಾಗಿನ ನೀಡಿದರು.
ಗಂಗಾಪೂಜೆ ಕಾರ್ಯಕ್ರಮದ ಬಳಿಕ ಹೊಳಕಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಡೇಸಾಬರ ಪಾಳ್ಯ ಗ್ರಾಮದಲ್ಲಿ, 38 ಲಕ್ಷ ರೂಗಳ ವೆಚ್ಚದಲ್ಲಿ ಮನೆ-ಮನೆಗೆ ಕುಡಿಯುವ ನೀರಿನ ನಲ್ಲಿ ಹಾಕುವ ಕಾಮಗಾರಿ ಮತ್ತು ಹೊಳಕಲ್ಲು ಮತ್ತು ಸಂಗೀ ಪಾಳ್ಯ ಗ್ರಾಮಗಳಲ್ಲಿ 38 ಲಕ್ಷ ರೂಗಳ ವೆಚ್ಚದಲ್ಲಿ ಮನೆ-ಮನೆಗೆ ಕುಡಿಯುವ ನೀರಿನ ನಲ್ಲಿ ಹಾಕುವ ಕಾಮಗಾರಿ,
ವಿವಿಧ ಕಾಮಗಾರಿಗಳ ಶಂಕುಸ್ಥಾಪನ ಸಮಾರಂಭದಲ್ಲಿ ಶಾಸಕರು ಪ್ರತಿ ಗ್ರಾಮಗಳಿಗೂ ಭೇಟಿ ನೀಡಿದಾಗಲೂ ಅಲ್ಲಿನ ಸ್ಥಳೀಯ ಬಡಕುಟುಂಬ ಗಳ ಆರೋಗ್ಯ ಸಮಸ್ಯೆಗಳಿಗೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ವೈಯಕ್ತಿಕ ಸಮಸ್ಯೆಗಳ ಸಹಾಯಕ್ಕಾಗಿ ಸ್ಥಳದಲ್ಲೇ 1. ಲಕ್ಷಕ್ಕೂ ಹೆಚ್ಚು ಧನಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದರು.
ಈ ಸಂದರ್ಭದಲ್ಲಿ ತುಮಕೂರು ತಾಲೂಕು ಜೆಡಿಎಸ್ ಅಧ್ಯಕ್ಷರಾದ ರಾಮಚಂದ್ರಪ್ಪ, ಹೊನ್ನುಡಿಕೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಮಂಜುನಾಥ್, ಮಾಜಿ ಎಪಿಎಂಸಿ ಅಧ್ಯಕ್ಷರಾದ ವಿಜಿ ಕುಮಾರ್, ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ದೀಪು,ಗ್ರಾಮ ಪಂಚಾಯತ್ ಸದಸ್ಯರಾದ ಹನುಮಂತರಾಯಪ್ಪ ಮುಂತಾದವರು ಉಪಸ್ಥಿತರಿದ್ದರು.